ಕೃಷಿ ನವೋದ್ಯಮ ಯೋಜನೆ: ಸ್ಟಾರ್ಟ ಪ್ ನಡಿ ಗರಿಷ್ಠ 20 ಲಕ್ಷ‌ ರೂ. ವರೆಗೆ ಸಹಾಯಧನ

ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೃಷಿ ನವೋದ್ಯಮ ಹೊಸ ಯೋಜನೆ ಜಾರಿಗೊಳಿಸುತ್ತಿದ್ದು, ಇದಕ್ಕಾಗಿ ಗರಿಷ್ಠ 20 ಲಕ್ಷ‌ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.

Written by - Manjunath N | Last Updated : Dec 31, 2023, 11:44 PM IST
  • ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ, ಅನುಷ್ಠಾನ ಸಮಿತಿ ಒಪ್ಪಿಗೆಯ ನಂತರ ರಾಜ್ಯ ಮಟ್ಟದಲ್ಲಿ ಅನುಮೋದನೆ ಪಡೆದ ನಂತರ ಈ ಸಹಾಯಧನ ನೀಡಲಾಗುತ್ತದೆ.
  • ಈ ಕುರಿತು ಹೆಚ್ಚಿನ ಮಾಹಿತಿಗೆ ಹತ್ತಿರದ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ.
ಕೃಷಿ ನವೋದ್ಯಮ ಯೋಜನೆ: ಸ್ಟಾರ್ಟ ಪ್ ನಡಿ ಗರಿಷ್ಠ 20 ಲಕ್ಷ‌ ರೂ. ವರೆಗೆ ಸಹಾಯಧನ title=
ಸಾಂಧರ್ಭಿಕ ಚಿತ್ರ

ಕಲಬುರಗಿ: ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೃಷಿ ನವೋದ್ಯಮ ಹೊಸ ಯೋಜನೆ ಜಾರಿಗೊಳಿಸುತ್ತಿದ್ದು, ಇದಕ್ಕಾಗಿ ಗರಿಷ್ಠ 20 ಲಕ್ಷ‌ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಮರಗಳ ಹನನ ಪ್ರಕರಣ: ಪ್ರತಾಪ್ ಸಿಂಹ ಸಹೋದರ‌ ವಿಕ್ರಂ ಸಿಂಹಗೆ ಜಾಮೀನು

ಕೃಷಿ ವಲಯಲ್ಲಿನ ನೂತನ ತಾಂತ್ರಿಕತೆಗಳು, ಆವಿಷ್ಕಾರ ಹಾಗೂ ನವೀನ ಪರಿಕಲ್ಪನೆಗಳ ಸೇವೆಗಳನ್ನು ಒಳಗೊಂಡ ವಾಣಜ್ಯೀಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ನೂತನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿ ಪರ ರೈತರು ಹೊಸದಾಗಿ ಕೃಷಿಯಲ್ಲಿ ನವೋದ್ಯಮ ಸ್ಥಾಪಿಸಲು ಮುಂದೆ ಬರುವವರಿಗೆ ಸ್ಟಾರ್ಟಪ್ ಯೋಜನೆಯ ವರದಿಯ ಶೇ.50 ರಷ್ಟು ಅಂದರೆ 5 ರಿಂದ‌ 20 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ.

ಇದನ್ನೂ ಓದಿ: "ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು"

ಅಲ್ಲದೆ ಈಗಾಗಾಲೆ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಅಥವಾ ಮೇಲ್ದರ್ಜೆಗೇರಿಸಲು (Scale up)ಗೂ ಶೇ.50 ರಷ್ಟು ಸಹಾಯಧನ (20 ರಿಂದ ಗರಿಷ್ಠ 50 ಲಕ್ಷ ರೂ.) ವರೆಗೆ  ಬ್ಯಾಂಕ್ ದಿಂದ ಸಾಲದ ಮೂಲಕ (Backended Subsidy) ನೀಡಲಾಗುವುದು.ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ, ಅನುಷ್ಠಾನ ಸಮಿತಿ ಒಪ್ಪಿಗೆಯ ನಂತರ ರಾಜ್ಯ ಮಟ್ಟದಲ್ಲಿ ಅನುಮೋದನೆ ಪಡೆದ ನಂತರ ಈ ಸಹಾಯಧನ ನೀಡಲಾಗುತ್ತದೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ಹತ್ತಿರದ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಅಥವಾ ಕಲಬುರಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News