ಮಂಡ್ಯ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸುತ್ತ ಮಾತನಾಡಿದ ಎನ್.ಚಲುವರಾಯಸ್ವಾಮಿ, ಅಧಿಕಾರಿಗಳ ನಕಲಿ ಸಹಿ ಕುಮಾರಸ್ವಾಮಿಯವರೇ ಮಾಡಿರಬಹದು ಎಂದಿದ್ದಾರೆ.
ಇದನ್ನೂ ಓದಿ: ರಾಜ್ಯದ ಜನರಿಗೆ ಈಗ ಭ್ರಷ್ಟಾಚಾರದ ಗ್ಯಾರಂಟಿ ಸಿಕ್ಕಿದೆ: ನಳೀನ್ ಕುಮಾರ್ ಕಟೀಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಟ್ವೀಟ್ ಮಾಡುವ ಮೂಲಕ ನಕಲಿರಾಮಯ್ಯ ಎಂದಿದ್ದ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಚಲುವರಾಯಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಜಿಲ್ಲೆಯ ಯಾರೊಬ್ಬ ಅಧಿಕಾರಿಗಳು ಸಹಿ ಹಾಕಿರುವ ಬಗ್ಗೆ ಹೇಳಿಕೆ ನೀಡಿಲ್ಲ. ಆದರೂ ಕುಮಾರಸ್ವಾಮಿ ಆರೋಪ ಗಮನಿಸಿದರೆ ಅವರೇ ಸಹಿ ಹಾಕಿ ರಾಜ್ಯಪಾಲರಿಗೆ ಕಳಿಸಿರಬಹುದು ಎಂದಿದ್ದಾರೆ.
ಒಕ್ಕಲಿಗರ ಏಳ್ಗೆಯನ್ನು ಸಹಿಸದೆ ಈ ರೀತಿ ಮಾತನಾಡುತಿದ್ದಾರೆ. ಮಂಡ್ಯ ಜಿಲ್ಲೆಯನ್ನ ಕಮಾರಸ್ವಾಮಿರವರಿಗೆ ದತ್ತು ಕೊಟ್ಟಿಲ್ಲ. ಮಾತಿನ ಮೇಲೆ ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು. ಇವರ ಆಳ್ವಿಕೆಯಲ್ಲಿ ಏನೇನು ನಡೆದಿದೆ ಎಂಬುದನ್ನ ಈ ರಾಜ್ಯದ ಜನ ಗಮನಿಸಿದ್ದಾರೆ. ಇಂತಹ ಹೇಳಿಕೆಗಳಿಗೆಲ್ಲಾ ಬೆಲೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅಧಿಕಾರಿಗಳ ಬಳಿ 6-8 ಲಕ್ಷ ಕಮಿಷನ್ ಆರೋಪ-ಕೃಷಿ ಸಚಿವ ಚಲುವರಾಯಸ್ವಾಮಿ ವಜಾಗೆ ಆಗ್ರಹ
ನಾಗಮಂಗಲ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸುವರ್ಣ ಹಾಗೂ ಪ್ರೌಢಶಾಲೆಯ ಅಮೃತ ಮಹೋತ್ಸವಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು. ಇದಕ್ಕೂ ಮುನ್ನ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಗುಂಡು ಎಸೆಯುವ ಮೂಲಕ ಚಾಲನೆ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.