ಕೃಷಿ ಸಾಲಕ್ಕಾಗಿ ಬ್ಯಾಂಕ್ಗಳಿಗೆ ಅಲೆದಾಡುವುದು ಬೇಡ ಎನ್ನುತ್ತಿದೆ `ಅಗ್ರಿಫೈ`!
ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ, ಸಮಯಕ್ಕೆ ಸರಿಯಾದಂತಹ ನೀರು ಮತ್ತು ವಿದ್ಯುತ್ ಹಾಗೂ ಬೆಳೆದ ಬೆಳೆಗೆ ಉತ್ತಮ ಬೆಲೆ ನೀಡಿದರೆ ನಮಗೆ ಸರ್ಕಾರದಿಂದ ಯಾವುದೇ ಸೌಲಭ್ಯ ಅಗತ್ಯವಿಲ್ಲ ಎಂದು ಅನೇಕ ಪ್ರಗತಿಪರ ರೈತರು ಹೇಳುತ್ತಾರೆ.
ಬೆಂಗಳೂರು: ದೇಶದ ಆರ್ಥಿಕತೆ ಕೃಷಿಯನ್ನು ಅವಲಂಬಿಸಿದೆ. ಅಂಕಿಸಂಖ್ಯೆಗಳ ಪ್ರಕಾರ ಶೇ 65 ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಕೃಷಿ ಬೆಳವಣಿಗೆಯಾಗಬೇಕಾದರೆ ಅಗತ್ಯಕ್ಕೆ ತಕ್ಕಂತಹ ಸಂದರ್ಭದಲ್ಲಿ ರೈತರಿಗೆ ಕೃಷಿ ಸಾಲವೂ ಅತ್ಯಗತ್ಯ. ಅಭಿವೃದ್ಧಿ ಶೀಲ ಆರ್ಥಿಕತೆ ಹೊಂದಿರುವಂತಹ ಭಾರತ ದೇಶಕ್ಕೆ ಕೃಷಿ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಕೃಷಿ ಸಾಲ ಅತ್ಯಗತ್ಯ ಎಂಬುದರಲ್ಲಿ ಎರಡು ಮಾತಿಲ್ಲ.
ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ, ಸಮಯಕ್ಕೆ ಸರಿಯಾದಂತಹ ನೀರು ಮತ್ತು ವಿದ್ಯುತ್ ಹಾಗೂ ಬೆಳೆದ ಬೆಳೆಗೆ ಉತ್ತಮ ಬೆಲೆ ನೀಡಿದರೆ ನಮಗೆ ಸರ್ಕಾರದಿಂದ ಯಾವುದೇ ಸೌಲಭ್ಯ ಅಗತ್ಯವಿಲ್ಲ ಎಂದು ಅನೇಕ ಪ್ರಗತಿಪರ ರೈತರು ಹೇಳುತ್ತಾರೆ.
ಇದನ್ನೂ ಓದಿ: "ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ"
ಆದರೆ, ವಾಸ್ತವಿಕ ಚಿತ್ರಣ ಬೇರೆಯದೇ ಇದೆ. ಬಹುತೇಕ ರೈತರಿಗೆ ಕೃಷಿ ಸಾಲ ಎಂಬುದೇ ಮರೀಚಿಕೆ ಆಗಿರುತ್ತದೆ. ಸಹಕಾರಿ ಸಂಸ್ಥೆಗಳ ಮೂಲಕ ನೀಡುವ ಸಾಲ ಕೆಲವೇ ರೈತರ ಕೈಗೆಟುಕುತ್ತದೆ. ಇನ್ನು ರಾಷ್ಟ್ರೀಕೃತ ಬ್ಯಾಂಕ್‌ಗಳು ದೊಡ್ಡ ರೈತರನ್ನು ಮಾತ್ರ ಪರಿಗಣಿಸುತ್ತವೆ. ಸುಮಾರು ಶೇ 80ರಷ್ಟು ರೈತರು ಯಾವುದೇ ಸಾಲಸೌಲಭ್ಯ ಸಿಗದೆ ದುಬಾರಿ ಬಡ್ಡಿ ದರದಲ್ಲಿ ಖಾಸಗಿ ಸಾಲ ತಂದು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಾರೆ. ಇಂತಹ ರೈತರಿಗೆ ಸುಲಭವಾಗಿ ಮತ್ತು ಅಗತ್ಯ ಸಮಯದಲ್ಲಿ ಸಾಲ ಸೌಲಭ್ಯ ಒದಗಿಸುವ ದೃಷ್ಟಿಯಿಂದ 'AgriFI' (The Agriculture Financing Initiative) ಸ್ಟಾರ್ಟಪ್ ಮುಂದಾಗಿದೆ.
"ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ"
ಇದಲ್ಲದೆ, ರೈತರಿಗೆ ಕಾಲಕಾಲಕ್ಕೆ ಹವಾಮಾನದ ಮಾಹಿತಿ, ಬೆಳೆಗೆ ಯಾವುದಾದರೂ ರೋಗ ತಗುಲಿದಾಗ ಅದಕ್ಕೆ ಯಾವ ಔಷಧ ಸಿಂಪಡಿಸಬೇಕು ಎಂಬ ಮಾಹಿತಿಯನ್ನು ಕೃಷಿ ತಜ್ಞರಿಂದ ಒದಗಿಸುವುದು, ಈ ವರ್ಷ ಯಾವ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಬಹುದು, ಈಗ ನಾಟಿ ಮಾಡಿದ ಬೆಳೆಗೆ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಬೆಲೆ ಎಷ್ಟು ಇರಬಹುದು ಇಂತಹ ವೈಜ್ಞಾನಿಕ ಮಾಹಿತಿಗಳನ್ನು ಈ ಆ್ಯಪ್ ಮೂಲಕ ಒದಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ರಘುಚಂದ್ರ ವಿವರಿಸಿದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.