ಸಿಎಂ ಪರ ನಿಂತ ಅಹಿಂದ, ಕುರುಬ ಸಮಾಜ: ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸುವ ಕುತಂತ್ರ ಎಂದು ವಾಗ್ಧಾಳಿ
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿರುವ ಸಮಾಜದ ಮುಖಂಡರು, ವಿಪಕ್ಷಗಳು ವಿನಾಕಾರಣ ಆರೋಪ ಹೊರಿಸಿ ಸಿಎಂ ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸುವ ಕುತಂತ್ರ ನಡೆಸಿವೆ.
ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಇಲಾಖೆ (ಮುಡಾ) ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಡೆಸಿರುವ ಬೆನ್ನಲ್ಲೇ ಧಾರವಾಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಪರ ಅಹಿಂದ ಹಾಗೂ ಕುರುಬ ಸಮಾಜ ಬೀದಿಗಿಳಿದಿವೆ. ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಹಿಂದುಳಿದ ನಾಯಕನ ವಿರುದ್ಧ ಷಡ್ಯಂತ್ರ ಕೈ ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿವೆ.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆ (Protest) ನಡೆಸಿರುವ ಸಮಾಜದ ಮುಖಂಡರು, ವಿಪಕ್ಷಗಳು ವಿನಾಕಾರಣ ಆರೋಪ ಹೊರಿಸಿ ಸಿಎಂ ಸಿದ್ದರಾಮಯ್ಯ (CM Siddaramaiah)ವರ್ಚಸ್ಸು ಕುಗ್ಗಿಸುವ ಕುತಂತ್ರ ನಡೆಸಿವೆ. ಸಿಎಂ ಸ್ಥಾನದಿಂದ ಕೆಳಗಿಳಿಸಿ ಸರಕಾರ ಅತಂತ್ರಗೊಳಿಸಲು ತಂತ್ರ ಮಾಡುತ್ತಿವೆ ಎಂದು ಅಹಿಂದ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ- ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಳು ಸ್ಥಳಗಳ ಗುರುತು: ಡಿಸಿಎಂ ಡಿಕೆ ಶಿವಕುಮಾರ್
ಶೋಷಿತ ಸಮುದಾಯಗಳ ಒಕ್ಕೂಟ, ಕುರುಬ ಸಮಾಜ (Kuruba Samaja) ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಪ್ರತಿಭಟಿಸಲಾಯಿತು. ಮಾನವ ಸರಪಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ರಾಜ್ಯಪಾಲರು, ರಾಷ್ಟ್ರಪತಿಗಳಿಗೆ ಮನವಿ ರವಾನಿಸಿದ್ದಾರೆ.
ಇದನ್ನೂ ಓದಿ- ಬಿ.ಎಸ್.ಯಡಿಯೂರಪ್ಪನ ತಟ್ಟೆಯಲ್ಲಿ ಕತ್ತೆಯೇ ಸತ್ತು ಬಿದ್ದಿದೆ: ಸಿಎಂ ಸಿದ್ದರಾಮಯ್ಯ
ಕುರುಬ ಸಮಾಜದ ಪ್ರಮುಖ ಸಿದ್ದು ತೇಜಿ ಮಾತನಾಡಿ, ಒಬ್ಬ ಹಿಂದುಳಿದ ವರ್ಗಗಳ ನಾಯಕನ ತೇಜೋವಧೆಗೆ ಭಾರತೀಯ ಜನತಾ ಪಕ್ಷ ಹಾಗೂ ಜಾತ್ಯಾತೀತ ಜನತಾದಳ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.