ಬೆಂಗಳೂರು : ಕಾಂಗ್ರೆಸ್ ಟಿಕೇಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿಯು ಕೊನೆಗೂ ಸ್ಕ್ರೀನಿಂಗ್ ಕಮಿಟಿ ರಚಿಸಿದೆ. 


COMMERCIAL BREAK
SCROLL TO CONTINUE READING

ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರನ್ನಾಗಿ ಎಐಸಿಸಿ ಕಾರ್ಯದರ್ಶಿಗಳಾದ ಮೋಹನ್ ಪ್ರಕಾಶ್ ಅವರನ್ನು ಆಯ್ಕೆ ಮಾಡಿದೆ. ಅಲ್ಲದೆ, ನೀರಜ್ ದಂಗಿ, ಮೊಹಮ್ಮದ್ ಜಾವೇದ್, ಸಪ್ತಗಿರಿ ಉಲಕಾ ಅವರನ್ನು ಕಮಿಟಿಯ ಸದಸ್ಯರನ್ನಾಗಿ ನೇಮಿಸಿದೆ.


ಇದನ್ನೂ ಓದಿ : Pejawara seer : 'ಯಾಕೆ ಬ್ರಾಹ್ಮಣರು ಸಿಎಂ ಆಗಬಾರದಾ? ಅವರು ಭಾರತದ ಪ್ರಜೆಗಳಲ್ಲವೆ?'


ಕಮಿಟಿಯ ಅಧಿಕೃತ ಸದಸ್ಯರನ್ನಾಗಿ, ಕೆಪಿಸಿಸಿ ಅಧ್ಯಕ್ಷ ಡಿಕೆ‌ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್, ಮಾಜಿ ಉಪ ಮುಖ್ಯ ಮಂತ್ರಿ ಡಾ.ಜಿ ಪರಮೇಶ್ವರ್ ನೇಮಿಸಿದೆ. ಚುನಾವಣಾ ಸಮಿತಿಯ ಶಿಫಾರಸುಗಳನ್ನು ಈ ಕಮಿಟಿ ಸ್ಕ್ರೀನಿಂಗ್ ಮಾಡಲಿದೆ.


ಇದನ್ನೂ ಓದಿ : CNG vehicles : ಸಾರಿಗೆ ಇಲಾಖೆಯಿಂದ ರಾಜ್ಯದ CNG ವಾಹನಗಳಿಗೆ ಬಿಗ್ ಶಾಕ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.