ಬೆಂಗಳೂರು : ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ (Gramapanchayath Election) ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ( H D Kumaraswamy) ಹೇಳಿದ್ದಾರೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎಂದು ಹೆಚ್ ಡಿಕೆ ಸ್ಪಷ್ಟಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇತ್ತೀಚೆಗೆ ಜೆಡಿಎಸ್ (JDS) ಬಿಜೆಪಿ ಜೊತೆ ವಿಲೀನಗೊಳ್ಳಲಿದೆ ಎಂಬ ಸುದ್ದಿ ಬಾರೀ ಸದ್ದು ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಜೆಡಿಎಸ್ ಎರಡೂ ಪಕ್ಷಗಳು ತಮ್ಮ ಸ್ಪಷ್ಟೀಕರಣವನ್ನೂ ನೀಡಿತ್ತು. ಇದೀಗ  ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ, (H D Kumaraswamy) ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಅನೇಕರು ಯತ್ನಿಸಿದ್ದಾರೆ. ಈಗ ಬಿಜೆಪಿಯೂ ಅದನ್ನೇ ಮಾಡುತ್ತಿದ ಎಂದಿದ್ದಾರೆ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ (BJP) ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 


B.S.Yediyurappa: ಮುಂದಿನ ಚುನಾವಣೆಯಲ್ಲಿ ‘ಮಿಷನ್‌ 140’ ಹೊಸ ಟಾರ್ಗೆಟ್ ಮೇಲೆ ‌ಬಿಎಸ್‌ವೈ ಕಣ್ಣು!


ಇನ್ನು ಪ್ರಧಾನಿ ಜೊತೆ ರಾಜ್ಯ ಬಿಜೆಪಿ ನಾಯಕರಿಗಿಂತ ತಾನು ಉತ್ತಮ ಸಂಬಂಧ ಹೊಂದಿರುವುದಾಗಿ ಹೇಳಿರುವ ಹೆಚ್ ಡಿಕೆ, ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಅಲ್ಲದೆ, ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. 


Sriramulu,: ಡಿ.ಕೆ.ಶಿವಕುಮಾರ್ ಗೆ 'ಸವಾಲು ಹಾಕಿದ' ಸಚಿವ ಶ್ರೀರಾಮುಲು..!
 


1997ರಲ್ಲಿ ದೇವೇಗೌಡರು (Devegowda) ಪ್ರಧಾನಿ ಸ್ಥಾನದಿಂದ ಇಳಿಯುವಾಗ ದಿ. ವಾಜಪೇಯಿ (Vajpayee) ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.