ಬೆಂಗಳೂರು: ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, 15ನೇ ಬಾರಿಗೆ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರು, ಆಗದು ಎಂದು ಕೈಕಟ್ಟಿ ಕೂರದೆ, ಸಾಧನೆಗೆ ಅಸಾಧ್ಯವಾದ್ದು ಯಾವುದೂ ಇಲ್ಲ ಎಂಬುದನ್ನು ಎಲ್ಲ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮೀ, ಯುವನಿಧಿ ಮತ್ತು ಗೃಹಜ್ಯೋತಿ ಗ್ಯಾರಂಟಿಗಳ ಅನುಷ್ಠಾನದ ಯಶಸ್ವಿ ಜಾರಿ ಮತ್ತು ಸ್ಪಷ್ಟ ಮುನ್ನೋಟದೊಂದಿಗೆ ಸಾಬೀತು ಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಬಜೆಟ್ ನ ಮುಖಪುಟದಲ್ಲ ಸಂವಿಧಾನದ ಪೀಠಿಕೆಯನ್ನು ಮುದ್ರಿಸಿದ್ದು, ಇದು ಗಣರಾಜ್ಯದ 75ನೆ ವರ್ಷದ ಆಚರಣೆಯ ಸಂಕೇತವಾಗಿದ್ದು, ನಮ್ಮ ಸರ್ಕಾರಕ್ಕೆ ಸಂವಿಧಾನವೇ ಪರಮೋಚ್ಛ ಎಂಬುದನ್ನೂ ನಿರೂಪಿಸುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ-Karnataka Budget 2024: ಜಲಸಂಪನ್ಮೂಲ ಇಲಾಖೆಗೆ ವಿಶೇಷ ಆದ್ಯತೆ-ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಪ್ರತ್ಯೇಕ ಯೋಜನಾ ವಿಭಾಗ


ಬಂಡೀಪುರ, ದಾಂಡೇಲಿ ಮತ್ತು  ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್ ಪ್ರಿಟೇಷನ್ ಕೇಂದ್ರ ನಿರ್ಮಿಸಲು 25 ಕೋಟಿ ರೂ. ನೀಡಲಾಗಿದ್ದರೆ, ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಾಗಿ ಪ್ರಕಟಿಸಿರುವುದು ಪರಿಸರ ಪ್ರವಾಸೋದ್ಯಮಕ್ಕೆ ಇಂಬು ನೀಡುತ್ತದೆ ಎಂದು ತಿಳಿಸಿದ್ದಾರೆ. 


ಆನೆ ಮತ್ತು ಚಿರತೆ ಕಾರ್ಯಪಡೆಗಳ ಉನ್ನತೀಕರಣ
ಈಗಾಗಲೇ ರಚಿಸಲಾಗಿರುವ 7 ಆನೆ ಕಾರ್ಯಪಡೆ ಮತ್ತು 2 ಚಿರತೆ ಕಾರ್ಯಪಡೆ ಕಾರ್ಯಕ್ಷಮತೆ ಹೆಚ್ಚಿಸಲು 40 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಜೊತೆಗೆ ಪ್ರಸಕ್ತ ಸಾಲಿನಲ್ಲಿ ಕೂಡ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಪ್ರಮುಖ್ಯತೆ ನೀಡುವುದಾಗಿ ಪ್ರಕಟಿಸಿರುವುದು ಮಾನವ-ವನ್ಯಜೀವಿ ಸಂಘರ್ಷದ ತ್ವರಿತ ಸ್ಪಂದನೆಗೆ ಸಹಕಾರಿಯಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.


ಬೀದರ್ ಜಿಲ್ಲೆ ಹೊನ್ನಿಕೇರಿ ಮೀಸಲು ಅರಣ್ಯ ಮತ್ತುಇತರೆ ಜೀವ ವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸಂರಕ್ಷಣಾತ್ಮಕ ಕಾರ್ಯಕ್ರಮಗಳಿಗೆ 15 ಕೋಟಿ ರೂ.ಅನುದಾನ ಒದಗಿಸಿರುವುದನ್ನು ಅರಣ್ಯ ಸಚಿವರು ಸ್ವಾಗತಿಸಿದ್ದಾರೆ.


ಸುಗಮ ವ್ಯಾಪಾರಕ್ಕೆ ಒತ್ತು
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ, ವಾಯು ಮತ್ತು ಪರಿಸರ ಸಂರಕ್ಷಣಾ ಕಾಯಿದೆಗಳನ್ವಯ ನೀಡುವ ಸಮ್ಮತಿ ಪತ್ರಗಳನ್ನು ಒಗ್ಗೂಡಿಸಿ ಸರಳೀಕರಣಗೊಳಿಸುವ ಮೂಲಕ ಸುಗಮ ವ್ಯಾಪಾರಕ್ಕೆ ಒತ್ತು ನೀಡಲಾಗಿದ್ದು, ಮಂಡಳಿಯ ಕಾರ್ಯಕ್ಷಮತೆ ಹೆಚ್ಚಿಸಲು ಅನುಮತಿ ಮತ್ತು ಪ್ರಮಾಣಪತ್ರಗಳ ನೀಡಿಕೆಗೆ ಏಕ ಗವಾಕ್ಷಿ ಯೋಜನೆ ತರುವ ಯೋಜನೆ ಕ್ರಾಂತಿಕಾರಿ ಹೆಜ್ಜೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.


ಬೆಂಗಳೂರಿನ ಖಾಸಗಿ ಸಮುಚ್ಛಯಗಳಲ್ಲಿ  ನಿತ್ಯ ಉತ್ಪತ್ತಿಯಾಗುವ ತ್ಯಾಜ್ಯ ಜಲವನ್ನು ಸಂಸ್ಕರಿಸಲು ಕ್ರಮ ವಹಿಸಲಾಗಿದ್ದು, ಈ ಸಂಸ್ಕರಣೆಯ ನಂತರ ಬಳಸಿ ಉಳಿಯುವ ನೀರನ್ನು ಮನೆ ಬಳಕೆಯ ಹೊರತಾಗಿ ಕಟ್ಟಡ ನಿರ್ಮಾಣ ಇತ್ಯಾದಿಗೆ ಮಂಡಳಿಯು ನಿಗದಿಪಡಿಸಿದ ಮಾನದಂಡಗಳ ಪ್ರಕಾರ ಮರುಬಳಕೆಗೆ ಪ್ರೋತ್ಸಾಹ ನೀಡಿರುವುದು ನೀರಿನ ಕೊರತೆಗೆ ಪರಿಹಾರವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.


ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ರೂ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು 5000ಕೋಟಿ ರೂ. ಒದಗಿಸಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸುವ ಘೋಷಣೆ ಹಾಗೂ ಕೆಕೆಆರ್.ಡಿ.ಬಿ. ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜುನ್ನು ಅವಶ್ಯವಿರುವ ಜಿಲ್ಲಾ  ಅಥವಾ ತಾಲೂಕು ಕೇಂದ್ರದಲ್ಲಿ ಸ್ಥಾಪಿಸುವ ಸಂಕಲ್ಪ ನಮ್ಮ ಭಾಗದ ಶೈಕ್ಷಣಿಕ ಪ್ರಗತಿಗೆ ಕಾರಣವಾಗಲಿದೆ ಎಂದು ಹೇಳಿದ್ದಾರೆ.


ಬೀದರ್ ನಾನಕ್  ಝೀರಾ ಸಾಹೇಬ್ ಗುರುದ್ವಾರ ಅಭಿವೃದ್ದಿಗೆ 1ಕೋಟಿ ರೂ., ಔರಾದ್ ನೀರಾವರಿ ಯೋಜನೆ, ಬೀದರ್- ಬೆಂಗಳೂರು ನಡುವಿನ ಆರ್ಥಿಕ ಕಾರಿಡಾರ್, ಬೀದರ್ ಜಿಲ್ಲಾ ಸಂಕೀರ್ಣ ಜಿಲ್ಲೆಗೆ ಬಜೆಟ್ ಕೊಡುಗೆಯಾಗಿದೆ.


ಕಲ್ಯಾಣ ಕರ್ನಾಟಕದಲ್ಲಿ ಹಿಮೋಫೀಲಿಯಾ ಮತ್ತು ತಲಸ್ಮೇನಿಯಾ ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಕಲಬುರಗಿ ಮತ್ತು ಕೊಪ್ಪಳದ ಐಸಿಡಿಟಿ ಕೇಂದ್ರಗಳ ಬಲವರ್ಧನೆಗೆ 7 ಕೋಟಿ ರೂ. ಒದಗಿಸಿರುವುದನ್ನು ಈಶ್ವರ ಖಂಡ್ರೆ ಸ್ವಾಗತಿಸಿದ್ದಾರೆ.


ಇದನ್ನೂ ಓದಿ-Karnataka Budget 2024: ರಾಜ್ಯ ಬಜೆಟ್ ಲೆಕ್ಕಾಚಾರದಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಸಿಕ್ಕ ಪಾಲು ಎಷ್ಟು?


ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮಾದರಿಯಲ್ಲಿ ಒಟ್ಟು1150 ಕಿ.ಮೀ. ರಸ್ತೆಗಳನ್ನು 1000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ನಿರ್ಧಾರದಿಂದ ಕ.ಕ.ದಲ್ಲಿ ಸಂಪರ್ಕ ಕ್ರಾಂತಿ ಆಗಲಿದೆ ಎಂದು ತಿಳಿಸಿದ್ದಾರೆ.


ಅನುಭವದ ಧಾರೆ: ಮುಖ್ಯಮಂತ್ರಿಯವರು ಹಣಕಾಸು ಸಚಿವರಾಗಿ ತಾವು ಪಡೆದ ಸುದೀರ್ಘ ಅನುಭವವನ್ನು ಈ ಬಜೆಟ್ ನಲ್ಲಿ ಧಾರೆ ಎರೆದಿದ್ದು, ಕಲ್ಯಾಣ ರಾಜ್ಯದ ಕನಸು ನನಸು ಮಾಡುವ ಸಂಯಕ್ ನೋಟವನ್ನು ಮುಂದಿಟ್ಟಿದ್ದಾರೆ ಮತ್ತು 1 ಟ್ರಿಲಿಯನ್ ಆರ್ಥಕ ರಾಜ್ಯ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ