ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು: ಸಿಎಂ ಸಿದ್ದರಾಮಯ್ಯ
5 ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ. ಬೇಕಿದೆ. ಈ ಹಣವನ್ನು ಖರ್ಚು ಮಾಡಲು ನಾವು ಸಿದ್ಧರಿದ್ದು, ನಮ್ಮ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತವೆಂದು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪಿಎಸ್ಐ ನೇಮಕಾತಿ ಹಗರಣ ಹಾಗೂ ಬಿಟ್ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮಂಗಳವಾರ ಮಾಧ್ಯಮ ಹೇಳಿಕೆ ನೀಡಿರುವ ಅವರು, ‘ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳಲಾಗುವುದು. ಅಂದಿನ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು, ಆದರೆ ಸತ್ತವರ ಸಂಖ್ಯೆ ಮೂವತ್ತಕ್ಕೂ ಹೆಚ್ಚಿತ್ತು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುತ್ತೇವೆ’ ಎಂದು ಹೇಳಿದ್ದಾರೆ.
ಬಿಟ್ ಕಾಯಿನ್ ಕೇಸ್ ಗೆ ಮತ್ತೆ ಮರುಜೀವ: ಉನ್ನತ ಮಟ್ಟದ ತನಿಖೆಗೆ ನಗರ ಪೊಲೀಸ್ ಆಯುಕ್ತರ ಪತ್ರ
ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಚೇಸ್ ಮಾಡಿ ಹಿಡಿದ KSRTC ನಿರ್ವಾಹಕ,ಚಾಲಕ..!
‘ನಮ್ಮ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ? ಬಡವರು ತಿನ್ನುವ ಅನ್ನದ ವಿಷಯದಲ್ಲಿ ರಾಜಕೀಯ ಗಿಮಿಕ್ ಮಾಡಲು ಹೋಗಬಾರದು. ಬಿಜೆಪಿಯವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ. 2022-23ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
‘2.50 ಲಕ್ಷ ಖಾಲಿ ಹುದ್ದೆಗಳನ್ನು ಒಂದೇ ಸಲಕ್ಕೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. 5 ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ. ಬೇಕಿದೆ. ಈ ಹಣವನ್ನು ಖರ್ಚು ಮಾಡಲು ನಾವು ಸಿದ್ಧರಿದ್ದು, ನಮ್ಮ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ’ವೆಂದು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.