ಲಂಚಕ್ಕೆ ಬೇಡಿಕೆಯಿಟ್ಟ ಆರೋಪ : ಆಲೋಕ್‌ಕುಮಾರ್ ವಿರುದ್ಧದ ಪ್ರಕರಣ ರದ್ದು ಪಡಿಸಿದ ಹೈಕೋರ್ಟ್


COMMERCIAL BREAK
SCROLL TO CONTINUE READING

ಬೆಂಗಳೂರು : ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆ ವ್ಯಾಪ್ತಿ ಆರೆಂಜ್ ಬಾರ್‌ನ ಮಾಲೀಕರು ಮತ್ತು ಗ್ರಾಹಕರ ನಡುವೆ ನಡೆದಿದ್ದ ಗಲಾಟೆ ಸಂಬಂಧ ಪ್ರಕರಣ ಮುಕ್ತಾಯಗೊಳಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಆಲೋಕ್ ಕುಮಾರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. 


ಇದನ್ನೂ ಓದಿ: ಕಾವೇರಿ ನೀರು ವಿವಾದ, ಭುಗಿಲೆದ್ದ ಆಕ್ರೋಶ: ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ


ತಮ್ಮ ವಿರುದ್ಧದ ಪ್ರಕರಣ ಮತ್ತು ಈ ಸಂಬಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಆಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಂiಪೀಠ ಈ ಆದೇಶ ನೀಡಿದೆ.ಅರ್ಜಿದಾರ ಐಪಿಎಸ್ ಅಧಿಕಾರಿಯ ವಿರುದ್ಧ ವಿಚಾರಣೆಗೆ ಪರಿಗಣಿಸುವುದಕ್ಕಾಗಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಲೋಕಾಯುಕ್ತ ವಿಚಾರಣಾ ನ್ಯಾಯಾಲಯ ಸಜ್ಙೆಯನ್ನು ಪರಿಗಣಿಸಿದೆ ಎಂದು ಅಭಿಪ್ರಾಯ ಪಟ್ಟು ಪ್ರಕರಣವನ್ನು ರದ್ದು ಪಡಿಸಿದೆ.ಆದರೆ, ಅರ್ಜಿದಾರರ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದ ಬಳಿಕ ವಿಚಾರಣೆಗೆ ಪರಿಗಣಿಸಲು ವಿಚಾರಣಾ ನ್ಯಾಯಾಲಯ ಸ್ವಾತಂತ್ರ್ಯವಾಗಿರಲಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.ಅಲ್ಲದೆ, ಆರೋಪ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ಅರ್ಜಿದಾರರ ಆಲೋಕ್ ಕುಮಾರ್ ಅವರ ಹೆಸರು ಉಲ್ಲೇಖವಾಗಿಲ್ಲ. ಅಲ್ಲದೆ, ಬಾರ್‌ನಲ್ಲಿ ನಡೆದ ಗಲಾಟೆ ಹಾಗೂ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಬಿ ವರದಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಪ್ರಕರಣ ರದ್ದುಪಡಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.


ಇದನ್ನೂ ಓದಿ: "ಸಂಗವ್ವ ಅವರ ಪ್ರತಿಕ್ರಿಯೆಯಿಂದ ಈ ಶಕ್ತಿ ಯೋಜನೆ ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು"-ಸಿಎಂ ಸಿದ್ದರಾಮಯ್ಯ 


ಪ್ರಕರಣದ ಹಿನ್ನೆಲೆ ಏನು ?


ರೌಡಿ ಶೀಟರ್ ಆಗಿದ್ದ ಬಿ.ಎಂ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಮತ್ತವರ ಆಪ್ತರು ವೈಯಾಲಿ ಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಆರೆಂಜ್ ಬಾರ್‌ನಲ್ಲಿ ಮಧ್ಯ ಸೇವಿಸುವ ಸಂದರ್ಭದಲ್ಲಿ ಗಲಾಟೆ ನಡೆದಿತ್ತು.  ಈ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 


ಈ ಪ್ರಕರಣವನ್ನು ಮುಕ್ತಾಯಗೊಳಿಸಲು ವೈಯಾಲಿ ಕಾವಲ್‌ನ ಪೊಲೀಸ್ ಅಧಿಕಾರಿಗಳು ಪ್ರಾರಂಭದಲ್ಲಿ ೫ ಲಕ್ಷ, ಬಳಿಕ ಒಂದು ಕೋಟಿ ರು.ಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂಬುದಾಗಿ ಫೈಟರ್ ರವಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋಟ್ ಸಲ್ಲಿಸಿದ್ದರು.ಬಿ ರಿಪೋಟ್‌ನ್ನು ತಿರಸ್ಕರಿಸಿದ್ದ ವಿಶೇಷ ನ್ಯಾಯಾಲಯ ಆಲೋಕ್ ಕುಮಾರ್ ವಿರುದ್ಧ ಸಂಜ್ಙಯನ್ನು ಪರಿಗಣಿಸಿ ವಿಚಾರಣೆ ಮುಂದುವರೆಸಿತ್ತು. ಇದನ್ನು ಪ್ರಶ್ನಿಸಿ ಆಲೋಕ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.