ಬೆಂಗಳೂರು : ಮನೆಯ ಕಾರಿನ ಚಾಲಕನಿಂದಲೇ ಲೈಂಗಿಕ ಕಿರುಕುಳವಾಗಿದೆ ಎಂದು ಆರೋಪಿಸಿ ವೈದ್ಯೆಯೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. 32 ವರ್ಷದ ಸಂತ್ರಸ್ತೆ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ಪುಲಿಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ನಕಲಿ ಭೂ ದಾಖಲೆ ಸೃಷ್ಟಿಸಿ ವಂಚನೆಗೆ ಯತ್ನ: ಬಿಬಿಎಂಪಿ ಕಚೇರಿ ಸಿಬ್ಬಂದಿ ಸಹಿತ ಐವರ ಬಂಧನ!


ದೂರುದಾರ ಮಹಿಳೆ ಡಿಸೆಂಬರ್ 15ರಂದು ತಮ್ಮ ನಾಲ್ಕೂವರೆ ವರ್ಷದ ಮಗನೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ತಲೆ ಸುತ್ತು ಬಂದು ಅಸ್ವಸ್ಥರಾಗಿದ್ದಾರೆ‌.ಈ ಸಮಯವನ್ನ ದುರ್ಬಳಕೆ ಮಾಡಿಕೊಂಡ ಅವರ ಕಾರು ಚಾಲಕ ನವೀದ್ ಪಾಶಾ ಅಸಭ್ಯವಾಗಿ ವರ್ತಿಸಿ, ಖಾಸಗಿ ಅಂಗಗಳನ್ನ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರತಿರೋಧ ತೋರಿದಾಗ ಮನೆಯ ತನಕ ಕಾರಿನಲ್ಲಿ ಕರೆದೊಯ್ದು ಬಿಟ್ಟು, ಕಾರ್ ಕೀ ನೀಡಿ ಪರಾರಿಯಾಗಿದ್ದಾನೆ ಎಂದು ದೂರು ನೀಡಲಾಗಿದೆ.ಗೀಸರ್‌ನಲ್ಲಿ ಈ ಪುಟ್ಟ ಡಿವೈಸ್ ಅಳವಡಿಸಿದರೆ ಅರ್ಧದಷ್ಟು ಕಡಿಮೆ ಆಗುತ್ತೆ ಕರೆಂಟ್ ಬಿಲ್


ಸದ್ಯ ನೊಂದ ಮಹಿಳೆ ನೀಡಿರುವ ದೂರಿನನ್ವಯ ಪುಲಿಕೇಶಿ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ) ಆರೋಪದಡಿ ಪ್ರಕರಣ ದಾಖಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.