ಮುಗಿದ ಚುನಾವಣಾ ಕಾವು: ಮಾದಪ್ಪನ ಬೆಟ್ಟಕ್ಕೆ ಭಕ್ತರ ದಂಡು
ಅಮಾವಾಸ್ಯೆಗೆ ಈ ಪರಿ ಭಕ್ತರು ಆಗಮಿಸುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರಿಂದ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಚಾಮರಾಜನಗರ: ಚುನಾವಣಾ ಭರಾಟೆ, ಎಲೆಕ್ಷನ್ ಕಾವು ಮುಗಿದ ಬಳಿಕ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ಅಮಾವಾಸ್ಯೆ ಹಿನ್ನಲೆ ಭಕ್ತಸಾಗರವೇ ಹರಿದುಬಂದಿದೆ.
ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯಿದ್ದ ಹಿನ್ನೆಲೆ ಕಳೆದ ಎರಡು ತಿಂಗಳಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿರಲಿಲ್ಲ. ಇದೀಗ ಚುನಾವಣೆ ಮುಗಿದು ಫಲಿತಾಂಶ ಹೊರ ಬಿದ್ದ ಹಿನ್ನೆಲೆ ಕಳೆದ ಎರಡು ದಿನಗಳಿಂದ ಸಾವಿರಾರು ಮಂದಿ ಭಕ್ತರು ಮಾದಪ್ಪನ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ- ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ: ವಿದ್ಯಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ ಭೀತಿ
ಅಮಾವಾಸ್ಯೆಗೆ ಈ ಪರಿ ಭಕ್ತರು ಆಗಮಿಸುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರಿಂದ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಇನ್ನು, ಅಮಾವಾಸ್ಯೆ ಅಂಗವಾಗಿ ದೇಗುಲ ಗರ್ಭಗುಡಿ ಸೇರಿದಂತೆ ಸುತ್ತಮುತ್ತಲ ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಿದ್ದು ದೇವರಿಗೆ ಬೆಳಗ್ಗೆಯಿಂದಲೇ ಅಭಿಷೇಕ, ಬಿಲ್ವಾರ್ಚನೆ ನೆರವೇರಿಸಿದ್ದಾರೆ.
ಇದನ್ನೂ ಓದಿ- DK Shivakumar: ನೂತನ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ - ಡಿ.ಕೆ.ಶಿವಕುಮಾರ್
ಹುಲಿವಾಹನ, ರುದ್ರಾಕ್ಷಿ ವಾಹನ ಹಾಗೂ ಬಸವ ವಾಹನ ಸೇವೆ ಮಾಡುತ್ತಿರುವ ಭಕ್ತರು ಬಿರು ಬಿಸಿಲಿನಲ್ಲೂ ಉತ್ಸಾಹದಿಂದ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ