ಮಂಡ್ಯ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಟ ಅಂಬರೀಶ್ ಸ್ಪರ್ಧೆ ಮಾಡಲಿದ್ದಾರೆ ಎಂದು ಅಂಬಿ ಬೆಂಬಲಿಗರು ಖಚಿತ ಪಡಿಸುವ ಮೂಲಕ ಈ ಬಗ್ಗೆ ಹರಡಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.


COMMERCIAL BREAK
SCROLL TO CONTINUE READING

ಹಿರಿಯ ನಟ ಹಾಗೂ ಮಾಜಿ ಶಾಸಕ್ ಅಂಬರೀಶ್ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಅವರ ಆಪ್ತ ಅಮರಾವತಿ ಚಂದ್ರಶೇಖರ್ ಖಚಿತ ಪಡಿಸಿದ್ದಾರೆ.


ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಅಂಬರೀಶ್ ಮಾತುಕತೆ ನಡೆಸಿದ್ದು, ಶೀಘ್ರವೇ ಅವರು ಮಂಡ್ಯಕ್ಕೆ ಬರಲಿದ್ದಾರೆ. ಅಭಿವೃದ್ಧಿ ಕಾರ್ಯಗಳ ಕೈಪಿಡಿ ಬಿಡುಗಡೆ ಮಾಡಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಅಮರಾವತಿ ಚಂದ್ರಶೇಖರ್ ತಿಳಿಸಿದರು.