ಆ್ಯಂಬಿಡೆಂಟ್ ಪ್ರಕರಣ: ಜನಾರ್ಧನ ರೆಡ್ಡಿ, ಅಲಿಖಾನ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

ಹೈ ಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಮಧ್ಯಂತರ ಆದೇಶ ವಿಸ್ತರಣೆ ಮಾಡಿ, ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ಸಿಸಿಬಿಗೆ ಆದೇಶ ನೀಡಿದ್ದಾರೆ. 

Updated: Dec 4, 2018 , 03:11 PM IST
ಆ್ಯಂಬಿಡೆಂಟ್ ಪ್ರಕರಣ: ಜನಾರ್ಧನ ರೆಡ್ಡಿ, ಅಲಿಖಾನ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ   ಹೈಕೋರ್ಟ್

ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಮತ್ತು ಅಲಿಖಾನ್ ವಿರುದ್ಧ ಬಲವಂತವಾಗಿ ಕ್ರಮ ಕೈಗೊಳ್ಳದಂತೆ ಹೈಕೋಟ್ ಸಿಸಿಬಿ ಪೊಲೀಸರಿಗೆ ಸೂಚನೆ ನೀಡಿದೆ. 

ಹೈ ಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಮಧ್ಯಂತರ ಆದೇಶ ವಿಸ್ತರಣೆ
ಮಾಡಿ ಆದೇಶ ನೀಡಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು, ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ಸಿಸಿಬಿಗೆ ಆದೇಶ ನೀಡಿದ್ದಾರೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಸಿಬಿ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ತಡೆಹಿಡಿಯುವಂತೆ ಜನಾರ್ಧನ ರೆಡ್ಡಿ ಮತ್ತು ಅಲಿಖಾನ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ, ಮುಂದಿನ ವಿಚಾರಣೆವರೆಗೂ ಜನಾರ್ದನ ರೆಡ್ಡಿ ಹಾಗೂ ಅಲಿಖಾನ್​ ವಿರುದ್ಧ ತನಿಖೆ ನಡೆಸದಿರಲು ಸಿಸಿಬಿಗೆ ಸೂಚನೆ ನೀಡಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 4 ಕ್ಕೆ ಮುಂದೂಡಿದಿತ್ತು. ಅದರನ್ವಯ ಇಂದು ಹೈಕೋರ್ಟ್ ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯಿತು.