ಬೆಂಗಳೂರು: NDRF ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ಬಿಡುಗಡೆ ಮಾಡುತ್ತದೆ. ಪ್ರತಿ 5 ವರ್ಷಗಳಿಗೆ ಒಮ್ಮೆ NDRF ನಿಯಮಗಳನ್ನು ತಿದ್ದುಪಡಿ ಮಾಡಬೇಕು’ ಎಂದು ಹೇಳಿದ್ದಾರೆ.
‘NDRF ನಿಯಮದಡಿ ರೈತರ ಬೆಳೆಗಳಿಗೆ ಇನ್‍ಫುಟ್ ಸಬ್ಸಿಡಿಯ ಮೊತ್ತ, ಮೀನುಗಾರರ ದೋಣಿಗಳಿಗಾದ ಹಾನಿ, ಜನ-ಜಾನುವಾರುಗಳಿಗೆ ಉಂಟಾದ ತೊಂದರೆ, ಮನೆ ಹಾನಿ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಆದ ನಷ್ಟಗಳಿಗೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಿಸಲಾಗುತ್ತದೆ. 2015-20ಕ್ಕೆ ಅನ್ವಯವಾಗುವಂತೆ ನಿಯಮಗಳನ್ನು 2015ರಲ್ಲಿ ಪರಿಷ್ಕರಿಸಲಾಗಿದ್ದು, ಅವಧಿ ಮುಗಿದ ನಂತರ 2020ರಲ್ಲಿ ಮತ್ತೆ ಪರಿಷ್ಕರಿಸಬೇಕಾಗಿತ್ತು. ಕಳೆದ 2 ವರ್ಷಗಳಿಂದ ಎಲ್ಲ ಉತ್ಪನ್ನಗಳ ಬೆಲೆ ದುಪ್ಪಟ್ಟಾಗಿವೆ. ಹಣದುಬ್ಬರ ದಾಖಲೆ ಮಟ್ಟಕ್ಕೆ ತಲುಪಿದೆ. ಇಷ್ಟಾದರೂ ಬಿಜೆಪಿ ಸರ್ಕಾರ NDRF ನಿಯಮ ಪರಿಷ್ಕರಿಸಿಲ್ಲ’
ಎನ್.ಡಿ.ಆರ್.ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕವಾದ ಪರಿಹಾರ ನೀಡಬೇಕೆಂದು ಕೇಂದ್ರ @BJP4India ಸರ್ಕಾರವನ್ನು ಒತ್ತಾಯಿಸುತ್ತೇನೆ. 1/12#NDRF pic.twitter.com/voyqj1SLU0
— Siddaramaiah (@siddaramaiah) June 21, 2022
ವೆಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
‘ಪ್ರಸ್ತುತ 1 ಎಕರೆ ಮಳೆಯಾಶ್ರಿತ ಪ್ರದೇಶದಲ್ಲಿ ರೈತರು ಬೆಳೆದ ಬೆಳೆ ಶೇ.33ಕ್ಕಿಂತ ಹೆಚ್ಚು ಹಾನಿಯಾದರೆ ಸಿಗುವ ಪರಿಹಾರ ಕೇವಲ 2,720 ರೂ. ಮಾತ್ರ. ಅದರಲ್ಲೂ ಗರಿಷ್ಠ 2.5 ಹೆಕ್ಟೇರ್‌ಗೆ 6,800 ರೂ. ಮಾತ್ರ. 1 ಎಕರೆ ರಾಗಿ, ಜೋಳ ಬೆಳೆಯಲು ಕನಿಷ್ಠ 25 ಸಾವಿರ ರೂ. ಖರ್ಚು ತಗಲುತ್ತದೆ. ಈ ಮೊತ್ತ ಪರಿಷ್ಕರಣೆಯಾಗಲೇಬೇಕಾಗಿದೆ. ನಾನು ವಿಧಾನಸಭೆಯ ಅಧಿವೇಶನಗಳಲ್ಲಿ ಕೂಡ ಕನಿಷ್ಠ 25 ಸಾವಿರ ರೂ. ಕೊಡಿ ಎಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದೆ’ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಈ ಮೊತ್ತವನ್ನು ಪರಿಷ್ಕರಣೆ ಮಾಡದ ಕಾರಣದಿಂದ ಕಳೆದ 2 ವರ್ಷಗಳಿಂದ ರೈತರಿಗೆ ವಿಪರೀತ ನಷ್ಟವಾಗಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಸಂಭವಿಸಿರುವ ನಷ್ಟದ ಪ್ರಮಾಣ ಒಂದು ಅಂದಾಜಿನ ಪ್ರಕಾರ 2 ಲಕ್ಷ ಕೋಟಿ ರೂ. ಆಗಬಹುದು. ಆದರೆ @BJP4India ಸರ್ಕಾರ ಬಿಡುಗಡೆ ಮಾಡಿದ ಮೊತ್ತ ಕೇವಲ 3,965 ಕೋಟಿ ರೂ. ಮಾತ್ರ. 7/12#NDRF pic.twitter.com/e0clyRTDKH
— Siddaramaiah (@siddaramaiah) June 21, 2022
ಇದನ್ನೂ ಓದಿ: Answer Madi Modi: ಪ್ರಧಾನಿ ಮೋದಿಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಸುರಿಮಳೆ
‘ಕೇಂದ್ರ ಸರ್ಕಾರ ಈ ಮೊತ್ತವನ್ನು ಪರಿಷ್ಕರಣೆ ಮಾಡದ ಕಾರಣದಿಂದ ಕಳೆದ 2 ವರ್ಷಗಳಿಂದ ರೈತರಿಗೆ ವಿಪರೀತ ನಷ್ಟವಾಗಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಸಂಭವಿಸಿರುವ ನಷ್ಟದ ಪ್ರಮಾಣ ಅಂದಾಜಿನ ಪ್ರಕಾರ 2 ಲಕ್ಷ ಕೋಟಿ ರೂ. ಆಗಬಹುದು. ಆದರೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ ಮೊತ್ತ ಕೇವಲ 3,965 ಕೋಟಿ ರೂ. ಮಾತ್ರ. ರಾಜ್ಯದಲ್ಲಿ ಮೇ ತಿಂಗಳಿಂದ ನವೆಂಬರ್‍ವರೆಗೆ ಸಂಭವಿಸಿದ ಪ್ರವಾಹದ ಹಾನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾರ್ಚ್ 2022ರಲ್ಲಿ ಕೇವಲ 492 ಕೋಟಿ ರೂ. ಬಿಡುಗಡೆ ಮಾಡಿದೆ. ಇದು ಪ್ರಧಾನಿ ಮೋದಿ ಸರ್ಕಾರದ ವೇಗ ಮತ್ತು ರೈತಪರ ಕಾಳಜಿ ಎಂದು ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ’ ಎಂದು ಟೀಕಿಸಿದ್ದಾರೆ.
ಕಳೆದ 3 ವರ್ಷಗಳಿಂದ ರಾಜ್ಯ @BJP4Karnataka ಸರ್ಕಾರ 3,890 ಕೋಟಿ ರೂ.ಗಳನ್ನು ರೈತರಿಗೆ, ವಸತಿ ಹಾನಿಯಾದವರಿಗೆ ನೀಡಿದೆ. ಇದಿಷ್ಟೂ ಸೇರಿದಂತೆ ಹೆಚ್ಚುವರಿ ಹಣವನ್ನು ಕೇಂದ್ರ @BJP4India ಸರ್ಕಾರ ನೀಡಬೇಕಾಗಿತ್ತು. ಯಾಕೆಂದರೆ ಪರಿಹಾರ ನೀಡುವುದಕ್ಕೋಸ್ಕರವೆ ಕೇಂದ್ರದ ಬಜೆಟ್‍ನಲ್ಲಿ ಹಣ ಮೀಸಲಿರಿಸಲಾಗುತ್ತದೆ. 10/12#NDRF pic.twitter.com/4YDrUMkhTh
— Siddaramaiah (@siddaramaiah) June 21, 2022
‘ಜನರು ಮತ್ತು ವಿಪಕ್ಷಗಳು ಪರಿಹಾರಕ್ಕಾಗಿ ಒತ್ತಡಗಳನ್ನು ತಂದಾಗ ರಾಜ್ಯ ಸರ್ಕಾರ 2,391 ಕೋಟಿ ರೂ.ಗಳಷ್ಟು ಪರಿಹಾರವನ್ನು ರೈತರಿಗೆ ನೀಡಿತು. ಕೇಂದ್ರ ಸರ್ಕಾರ ನೀಡಬೇಕಾದ ಪರಿಹಾರದ ಮೊತ್ತವನ್ನು ಬಿಜೆಪಿ ಸರ್ಕಾರ ನೀಡಬೇಕಾಯಿತು. ಆ ಮೂಲಕ ಕೇಂದ್ರವು ರಾಜ್ಯವನ್ನು ಇನ್ನಷ್ಟು ಶೋಷಣೆ ಮಾಡಿತು. ಕಳೆದ 3 ವರ್ಷಗಳಿಂದ ರಾಜ್ಯ ಬಿಜೆಪಿ ಸರ್ಕಾರ 3,890 ಕೋಟಿ ರೂ.ಗಳನ್ನು ರೈತರಿಗೆ, ವಸತಿ ಹಾನಿಯಾದವರಿಗೆ ನೀಡಿದೆ. ಇದಿಷ್ಟೂ ಸೇರಿದಂತೆ ಹೆಚ್ಚುವರಿ ಹಣವನ್ನು ಕೇಂದ್ರ ಬಿಜೆಪಿ ಸರ್ಕಾರ ನೀಡಬೇಕಾಗಿತ್ತು. ಯಾಕೆಂದರೆ ಪರಿಹಾರ ನೀಡುವುದಕ್ಕೋಸ್ಕರವೆ ಕೇಂದ್ರದ ಬಜೆಟ್‍ನಲ್ಲಿ ಹಣ ಮೀಸಲಿರಿಸಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಅಸಾನಿ ಚಂಡಮಾರುತದಿಂದ ತೊಂದರೆಗೊಳಗಾದವರಿಗೆ ತುರ್ತಾಗಿ ಪರಿಹಾರ ನೀಡಬೇಕು. ಕಳೆದ ಮೂರು ವರ್ಷಗಳಿಂದ ಹಾನಿಯಾಗಿರುವ ಸಾವಿರಾರು ಮನೆಗಳಿಗೆ ಈಗಲೂ ಸಮರ್ಪಕ ಪರಿಹಾರ ನೀಡಿಲ್ಲ. ಶಾಶ್ವತ ನೆಲೆ ಕಲ್ಪಿಸಿಲ್ಲ. ಈ ವ್ಯವಸ್ಥೆಯನ್ನು ತುರ್ತಾಗಿ ಮಾಡಬೇಕಾಗಿದೆಯೆಂದು @BJP4Karnataka ಸರ್ಕಾರವನ್ನು ಆಗ್ರಹಿಸುತ್ತೇನೆ. 12/12#NDRF
— Siddaramaiah (@siddaramaiah) June 21, 2022
‘NDRF ನಿಯಮಗಳಿಗೆ 2020ರಿಂದಲೇ ಪೂರ್ವಾನ್ವಯವಾಗುವಂತೆ ತಿದ್ದುಪಡಿ ಮಾಡಿ ಬಾಕಿ ಪರಿಹಾರವನ್ನು ಬಿಡುಗಡೆ ಮಾಡಬೇಕು. ಮನೆ ಕಳೆದುಕೊಂಡವರಿಗೆ, ಮೀನುಗಾರರಿಗೆ ಹಾಗೂ ಇತರೆ ಎಲ್ಲ ಬಾಧಿತರಿಗೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಪರಿಹಾರ ನೀಡುವಂತಾಗಬೇಕು. ಇತ್ತೀಚೆಗೆ ಅಸಾನಿ ಚಂಡಮಾರುತದಿಂದ ತೊಂದರೆಗೊಳಗಾದವರಿಗೆ ತುರ್ತಾಗಿ ಪರಿಹಾರ ನೀಡಬೇಕು. ಕಳೆದ 3 ವರ್ಷಗಳಿಂದ ಹಾನಿಯಾಗಿರುವ ಸಾವಿರಾರು ಮನೆಗಳಿಗೆ ಈಗಲೂ ಸಮರ್ಪಕ ಪರಿಹಾರ ನೀಡಿಲ್ಲ. ಶಾಶ್ವತ ನೆಲೆ ಕಲ್ಪಿಸಿಲ್ಲ. ಈ ವ್ಯವಸ್ಥೆಯನ್ನು ತುರ್ತಾಗಿ ಮಾಡಬೇಕಾಗಿದೆಯೆಂದು’ ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಹೃದಯಸ್ಪರ್ಶಿ ಘಟನೆ: ತಾಯಿ-ಮಗಳನ್ನು ಒಂದು ಮಾಡಿದ ಪೊಲೀಸರು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.