ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಬೊಮ್ಮಯಿ ‌ಸರ್ಕಾರಕ್ಕೆ ಮೇಜರ್ ಸರ್ಜರಿ ಸಾಧ್ಯತೆ!

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ತಿಂಗಳ ಅಂತರದಲ್ಲಿ ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Written by - Yashaswini V | Last Updated : May 3, 2022, 09:42 AM IST
  • ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.
  • ಏತನ್ಮಧ್ಯೆ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಹೊಸ ಮುಖಗಳಿಗೆ ಮಣೆ ಹಾಕುವ ಕುರಿತಂತೆ ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ.
  • ಸಿಎಂ ಬೊಮ್ಮಾಯಿ ಕುರ್ಚಿಗೆ ಕುತ್ತು ಬಂದಿದಿಯಾ? ಮತ್ತೆ ನಾಯಕತ್ವ ಬದಲಾವಣೆ ಆಗಲಿದೆಯೇ ಎಂಬ ವಿಷಯಗಳು ಭಾರೀ ಕುತೂಹಲ ಕೆರಳಿಸಿವೆ.
ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಬೊಮ್ಮಯಿ ‌ಸರ್ಕಾರಕ್ಕೆ ಮೇಜರ್ ಸರ್ಜರಿ ಸಾಧ್ಯತೆ! title=
Amit Shah In Karnataka

ಬೆಂಗಳೂರು: ಬಿಜೆಪಿ ಮಾಸ್ಟರ್ ಮೈಂಡ್, ಚುನಾವಣಾ ಚಾಣಾಕ್ಷ ಎಂದೇ ಬಣ್ಣಿಸಲಾಗುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ತಿಂಗಳ ಅಂತರದಲ್ಲಿ ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು ತೀವ್ರ ಕುತೂಹಲ ಹೆಚ್ಚಿಸಿದೆ.  ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅಮಿತ್ ಶಾ, ಈ ಸಂದರ್ಭದಲ್ಲಿ ರಾಜ್ಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದು ಬೊಮ್ಮಯಿ ‌ಸರ್ಕಾರಕ್ಕೆ ಮೇಜರ್ ಸರ್ಜರಿ ಮಾಡುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ.

ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮತ್ತು ಹಳೆ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ  ಮಾರ್ಗದರ್ಶನ ನೀಡಿದ್ದರು.

ಇದಾದ ನಂತರ ಕಳೆದ ವಾರಾಂತ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಭೇಟಿ ನೀಡಿದ್ದರು. ಇದೀಗ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಏತನ್ಮಧ್ಯೆ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಹೊಸ ಮುಖಗಳಿಗೆ ಮಣೆ ಹಾಕುವ ಕುರಿತಂತೆ ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದರೊಂದಿಗೆ  ಸಿಎಂ ಬೊಮ್ಮಾಯಿ ಕುರ್ಚಿಗೆ ಕುತ್ತು ಬಂದಿದಿಯಾ? ಮತ್ತೆ ನಾಯಕತ್ವ ಬದಲಾವಣೆ ಆಗಲಿದೆಯೇ ಎಂಬ ವಿಷಯಗಳು ಭಾರೀ ಕುತೂಹಲ ಕೆರಳಿಸಿವೆ. ಅಮಿತ್ ಶಾ ಬೇಟಿಯ ವೇಳೆ ಅನೇಕ ವಿಚಾರಗಳ ಬಗ್ಗೆ ವಿಸ್ತೃತವಾಗಿ ಚರ್ಚೆಯಾಗುವ ಸಾಧ್ಯತೆ ಇದ್ದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ- ಎಂಇಎಸ್ ಕಿರಾತಕರ ಬಗ್ಗೆ ಬಿಜೆಪಿ ಸರ್ಕಾರ ಮೃದುದೋರಣೆ ತಾಳಿದೆ: ಎಚ್‍ಡಿಕೆ ಆರೋಪ

ಬೆಂಗಳೂರಿನಲ್ಲಿ ಕೇಂದ್ರ ಸಹಕಾರ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದ ವಿವರ:
>> ಬೆಳಗ್ಗೆ 10ಕ್ಕೆ ಚಾಲುಕ್ಯ ವೃತ್ತದಲ್ಲಿರುವ ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ

>>  ಬೆಳಗ್ಗೆ 10.30 ಕ್ಕೆ ಆರ್‌ಬಿಐ ಎದುರು ನೃಪತುಂಗ ವಿವಿಗೆ ಗುದ್ದಲಿಪೂಜೆ

>>  ಬಳಿಕ ಬಳ್ಳಾರಿಯಲ್ಲಿ ಫೊರೆನ್ಸಿಕ್ ಲ್ಯಾಬ್‌ನ ವರ್ಚುವಲ್ ಉದ್ಘಾಟನೆ..

>>   ನಂತರ ಮಧ್ಯಾಹ್ನ 12 ಕ್ಕೆ ಯಲಹಂಕದಲ್ಲಿ‌ ಕೇಂದ್ರದ ಗೃಹ ಸಚಿವಾಲಯದ ಡಿಆರ್ಸಿ ಕೇಂದ್ರದ ಕಾರ್ಯಕ್ರಮದಲ್ಲಿ ಭಾಗಿ..

>>  ಮಧ್ಯಾಹ್ನ 2-3 ರವರೆಗೆ ಸಿಎಂ ಅವರ ಸರ್ಕಾರಿ‌ ನಿವಾಸದಲ್ಲಿ ಅಮಿತ್ ಶಾ ಅವರಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆ

>> ಸಿಎಂ ಜೊತೆ ಅಮಿತ್ ಷಾ ಮಧ್ಯಾಹ್ನದ ಭೋಜನ. 
- ಭೋಜನ ವೇಳೆ ಕೆಲವು ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರು ಭಾಗಿಯಾಗುವ ಸಾಧ್ಯತೆ.

ಇದನ್ನೂ ಓದಿ- ‘ಲೂಟಿಕೊರರು ಬಿಜೆಪಿ ಸರ್ಕಾರದ ಮಂತ್ರಿಗಳಾಗಿರುವಾಗ, ಕಳ್ಳರಾದವರೆಲ್ಲ ಪೊಲೀಸರಾಗುತ್ತಿದ್ದಾರೆ!’

>> ಮಧ್ಯಾಹ್ನ 3 ರಿಂದಸಂಜೆ  5 ಗಂಟೆವರೆಗೆಖಾಸಗಿ  ಹೋಟೆಲ್ ನಲ್ಲಿ ಬಿಜೆಪಿ ಪಕ್ಷದ ಸಭೆ‌. ಸಭೆಯಲ್ಲಿ ಬಿಜೆಪಿ ಸಂಸದರು, ಸಚಿವರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ಅಮಿತ್ ಶಾ ಮಾತುಕತೆ.

>> ಸಂಜೆ ಐದು ಮೂವತ್ತಕ್ಕೆ ಖೇಲೋ ಇಂಡಿಯ ಸಮಾರೋಪ ಸಮಾರಂಭದಲ್ಲಿ ಅಮಿತ್ ಶಾ ಭಾಗಿ.

ಸಂಜೆ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ ಸಮಾರೋಪ ಸಮಾರಂಭದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾತ್ರಿಯೇ ದೆಹಲಿಗೆ ಮರಳಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News