"ಅಮಿತ್ ಶಾ ಅವರು ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ"-ಸಿಎಂ ಸಿದ್ದರಾಮಯ್ಯ

 ದೇಶದ ಗೃಹ ಸಚಿವರಾದ ಅಮಿತ್ ಶಾ ಅವರು ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

Written by - Manjunath N | Last Updated : Apr 3, 2024, 04:13 PM IST
  • ಡಿಸೆಂಬರ್ 23ಕ್ಕೆ ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಶಾ ಅವರು ತಿಳಿಸಿದ್ದರು.
  • ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಬರ ಪರಿಹಾರವನ್ನು ನೀಡಿಲ್ಲ
  • ದೇಶದ ಗೃಹ ಸಚಿವರಾದ ಅಮಿತ್ ಶಾ ಅವರು ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ
"ಅಮಿತ್ ಶಾ ಅವರು ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ"-ಸಿಎಂ ಸಿದ್ದರಾಮಯ್ಯ title=
file photo

ಬೆಂಗಳೂರು: ದೇಶದ ಗೃಹ ಸಚಿವರಾದ ಅಮಿತ್ ಶಾ ಅವರು ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಈ ಕುರಿತಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23 ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ.ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಅದೇ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ. ನಂತರ ಡಿಸೆಂಬರ್ 19ರಂದು ನಾನು ಖುದ್ದು ಪ್ರಧಾನ ಮಂತ್ರಿಗಳನ್ನು ಹಾಗೂ 20ರಂದು ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ತಿಳಿಸಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ- ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ 23ಕ್ಕೆ ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಶಾ ಅವರು ತಿಳಿಸಿದ್ದರು.ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಬರ ಪರಿಹಾರವನ್ನು ನೀಡಿಲ್ಲ.
ದೇಶದ ಗೃಹ ಸಚಿವರಾದ ಅಮಿತ್ ಶಾ ಅವರು ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ನಿರೂಪಿಸಲು ಸಿದ್ಧವಿದ್ದೇನೆ. ಕೇಂದ್ರದ ಈ ಧೋರಣೆಯನ್ನು ಪ್ರಶ್ನಿಸಿ ನ್ಯಾಯಾಲಯದ ಕದವನ್ನೂ ತಟ್ಟಿದ್ದೇವೆ ಎಂದರು.

ಇದನ್ನೂ ಓದಿ: " ಅಮಿತ್ ಶಾ ಅವರೇ ನೀವು ಮಾಡಿರುವ ಘನಘೋರ ಅನ್ಯಾಯವನ್ನು ಮುಚ್ಚಿಹಾಕಲು ಸುಳ್ಳಿನ ಮೊರೆ ಹೋಗಿದ್ದೀರಿ"

ದೇಶದ ವಿವಿಧೆಡೆಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು ಕೇಂದ್ರಕ್ಕೆ ನೀಡಲಾಗಿರುತ್ತದೆ. ಎನ್ ಡಿ ಆರ್ ಎಫ್ ಹಣ ರಾಜ್ಯಗಳಿಗೆ ಸೇರಿದ್ದು. ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News