CM Siddaramaiah: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


COMMERCIAL BREAK
SCROLL TO CONTINUE READING

ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah), ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು 2023ರ ಸೆಪ್ಟೆಂಬರ್ 23ರಂದೇ ಕೇಂದ್ರ ಸರ್ಕಾರ (Central Govt)ಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಈ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ. ನಂತರ ಡಿಸೆಂಬರ್ 19ರಂದು ನಾನು ಖುದ್ದು ಪ್ರಧಾನ ಮಂತ್ರಿಗಳನ್ನು ಹಾಗೂ 20ರಂದು ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ತಿಳಿಸಿದ್ದೇನೆ. ಡಿಸೆಂಬರ್  23ಕ್ಕೆ  ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಅವರು ತಿಳಿಸಿದ್ದರು. 


ಇದನ್ನೂ ಓದಿ- ಧಾರವಾಡದ ಪ್ರತಿ ಹಳ್ಳಿಗೂ ಒಂದೂವರೆ ವರ್ಷದಲ್ಲಿ ಮಲಪ್ರಭಾ ನೀರು ಕೊಟ್ಟೇ ಕೊಡುವೆ: ಸಚಿವ ಜೋಶಿ ಭರವಸೆ


ಬರ ಪರಿಹಾರ (Drought Relief)ಕ್ಕಾಗಿ ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ  ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ. ದೇಶದ ಗೃಹ ಸಚಿವರಾದ ಅಮಿತ್  ಶಾ ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಸೂಕ್ತ ದಾಖಲಾತಿ ಗಳೊಂದಿಗೆ ನಿರೂಪಿಸಲು ಸಿದ್ಧವಿದ್ದು, ಕೇಂದ್ರದ ಈ ಧೋರಣೆಯನ್ನು ಪ್ರಶ್ನಿಸಿ, ನ್ಯಾಯಾಲಯದ ಕದವನ್ನೂ ತಟ್ಟಲಾಗಿದೆ ಎಂದರು.


ಇದನ್ನೂ ಓದಿ- ಬಿಜೆಪಿ ಅವರಿಂದ ಅಪಪ್ರಚಾರ, ಮರಳು ದಂಧೆ ಸಾಬೀತು ಪಡಿಸಿದರೇ ನಾಮಪತ್ರವೇ ಸಲ್ಲಿಸಲ್ಲ: ಸುನಿಲ್ ಬೋಸ್


ದೇಶದ ವಿವಿಧೆಡೆಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳಿಗೆ ಪರಿಹಾರ (Relief From Natural Calamities) ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು  ಕೇಂದ್ರಕ್ಕೆ ನೀಡಲಾಗಿರುತ್ತದೆ. ಎನ್ ಡಿ ಆರ್ ಎಫ್ ಹಣ ರಾಜ್ಯಗಳಿಗೆ ಸೇರಿದ್ದು. ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.