close

News WrapGet Handpicked Stories from our editors directly to your mailbox

ಬೆಂಗಳೂರಿನಲ್ಲಿಂದು ಅಮಿತ್​ ಶಾ ರೋಡ್​ ಶೋ; ತೇಜಸ್ವಿ ಸೂರ್ಯ ಪರ ಪ್ರಚಾರ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯುವ ನಾಯಕ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿರುವ ಅಮಿತ್ ಶಾ.

Updated: Apr 2, 2019 , 09:40 AM IST
ಬೆಂಗಳೂರಿನಲ್ಲಿಂದು ಅಮಿತ್​ ಶಾ ರೋಡ್​ ಶೋ; ತೇಜಸ್ವಿ ಸೂರ್ಯ ಪರ ಪ್ರಚಾರ
File Image

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ ಈಗಾಗಲೇ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸಿದ್ದಪಡಿಸಿದೆ. ಅದರಂತೆ ಬೆಂಗಳೂರಿನಲ್ಲಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರೋಡ್ ಶೋ ನಡೆಸಿ ಮತಯಾಚನೆ ಮಾಡಲಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಪದ್ಮನಾಭನಗರ ಕ್ಷೇತ್ರದಲ್ಲಿ ಸಂಜೆ 6 ಗಂಟೆಗೆ ಬನಶಂಕರಿ ದೇವಾಲಯದೈಲಂದ 1 ಕಿ.ಮೀ.ವರೆಗೆ ರೋಡ್ ಶೋ ನಡೆಸಲಿರುವ ಶಾ, ಪಕ್ಷದ ಯುವ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತಯಾಚನೆ ನಡೆಸಲಿದ್ದಾರೆ.

ಈ ವೇಳೆ ರಾಜ್ಯ ಬಿಜೆಪಿ ನಾಯಕರಾದ ಆರ್. ಅಶೋಕ್, ವಿ. ಸೋಮಣ್ಣ, ಸತೀಶ್ ರೆಡ್ಡಿ, ರವಿಸುಬ್ರಮಣ್ಯ, ಉದಯ್ ಗರುಡಾಚಾರ್ ಮತ್ತಿತರರು ಅಮಿತ್ ಶಾಗೆ ಸಾಥ್ ನೀಡಲಿದ್ದಾರೆ.