ಧಾರವಾಡ: ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ, ಸಂಸತ್ತಿನಲ್ಲಿ ಅಧಿವೇಶನ ನದೆಸಲು ಅವಕಾಶ ನೀಡದೆ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ರಾಷ್ಟ್ರಾದ್ಯಂತ ಇಂದು ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯದಲ್ಲೂ ಪ್ರತಿಭಟನೆ ನಡೆಯುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. 


COMMERCIAL BREAK
SCROLL TO CONTINUE READING

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರುನಾಡ ಜಾಗೃತಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬುಧವಾರ ರಾತ್ರಿಯೇ ಹುಬ್ಬಳ್ಳಿಗೆ ಆಗಮಿಸಿರುವ ಅಮಿತ್ ಷಾ ಇಂದು ಮಧ್ಯಾಹ್ನ 2 ಗಂಟೆಯವರೆಗೂ ಧಾರವಾಡದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಪ್ರತಿಭಟನೆಗೆ ಜಿಲ್ಲಾಧಿಕಾರಿಗಳಿಂದ ಅನುಮತಿ ದೊರೆತಿದೆ ಎನ್ನಲಾಗಿದೆ. 


ಇಂದು ಬೆಳಿಗ್ಗೆ 10.30ಕ್ಕೆ ಧಾರವಾಡದ ಸಾಧನಕೇರಿಯಲ್ಲಿರುವ ದ.ರಾ.ಬೇಂದ್ರೆಯವರ ಸ್ಮಾರಕಕ್ಕೆ ಗೌರವ ಸಲ್ಲಿಸಲಿರುವ ಅಮಿತ್ ಷಾ, ನಂತರ ಮುರುಘಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ನೇರವಾಗಿ ಜಿಲಾಧಿಕಾರಿಗಳ ಕಚೇರಿ ಬಳಿ ನಡೆಯಲಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.