ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನದಿಂದ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಬೆಳಗಾವಿ, ಬಾಗಲಕೋಟೆ ಪ್ರದೇಶಗಳಲ್ಲಿ ತಮ್ಮ ಪ್ರವಾಸ ಕೈಗೊಳ್ಳಲಿದ್ದಾರೆ. 


COMMERCIAL BREAK
SCROLL TO CONTINUE READING

ಶುಕ್ರವಾರ ಬೆಳಿಗ್ಗೆ 08:30ಕ್ಕೆ ಹುಬ್ಬಳಿಯಿಂದ ಹೆಲಿಕಾಫ್ಟರ್ ಮೂಲಕ ಕಿತ್ತೂರಿಗೆ ಪ್ರಯಾಣ ಬೆಳೆಸಲಿರುವ ಅಮಿತ್ ಶಾ, ಬೆಳಿಗ್ಗೆ 10:05ಕ್ಕೆ ಕಿತ್ತೂರಿನಲ್ಲಿ ಚೆನ್ನಮ್ಮ ಪ್ರತಿಮೆಗೆ ಗೌರವಾರ್ಪಣೆ ಸಲ್ಲಿಸಿ, ಬೆಳಗ್ಗೆ 10:50ಕ್ಕೆ ನಂದಗಡಕ್ಕೆ ಆಗಮಿಸಲಿರುವ ಶಾ ಅಲ್ಲಿ ಸಂಗೋಳ್ಳಿ ರಾಯಣ್ಣ ಮೆಮೋರಿಯಲ್​ಗೆ ಗೌರವಾರ್ಪಣೆ ಸಲ್ಲಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.


ಮಧ್ಯಾಹ್ನ 12:30ಕ್ಕೆ ಮುಧೋಳದಲ್ಲಿ ನಡೆಯಲಿರುವ ಬೆಳಗಾವಿ ವಿಭಾಗದ ಶಕ್ತಿಕೇಂದ್ರ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 03:30ಕ್ಕೆ ಗೋಕಾಕದಲ್ಲಿ ರೋಡ್ ಶೋ ನಡೆಸಲಿರುವ ಅಮಿತ್ ಶಾ, ಸಂಜೆ 05:00ಕ್ಕೆ ನಿಪ್ಪಾಣಿಯಲ್ಲಿ ನಡೆಯಲಿರುವ ಮಹಿಳಾ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಸಂಜೆ 07:30ಕ್ಕೆ ಕೆಎಲ್​ಇ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಇಂದು ರಾತ್ರಿ 9 ಗಂಟೆಗೆ ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ಶಾ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.