ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪ್ರಜೆಗಳ ಕಿತ್ತಾಟ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಮ್ಮನಹಳ್ಳಿಯ ಕುಳ್ಳಪ್ಪ ಸರ್ಕಲ್ನಲ್ಲಿ ನಡೆದಿದೆ.
ಚಾಕುವಿನಿಂದ ಇರಿದು ಆಫ್ರಿಕನ್ ಪ್ರಜೆ (An African citizen) ವಿಕ್ಟರ್ ಎಂಬಾತನನ್ನು ಭೀಕರವಾಗಿ ನಡುರಸ್ತೆಯಲ್ಲೇ ಹತ್ಯೆ ಮಾಡಲಾಗಿದೆ. ಇನ್ನು ವಿಕ್ಟರ್ನ ಹೀಗೆ ಭೀಕರವಾಗಿ ಹತ್ಯೆ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ವಿಕ್ಟರ್ನ ಸ್ನೇಹಿತನೇ ಈ ಕೃತ್ಯವನ್ನ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ- ಚಿಕ್ಕಮಗಳೂರಿನ ಶಾಲೆಯೊಂದರಲ್ಲಿ ಕನಿಷ್ಠ 10 ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಕೊರೊನಾ ಧೃಢ
ಕೊಲೆ ಮಾಡಿ ಎಸ್ಕೇಪ್:
ಇಬ್ಬರೂ ಸ್ನೇಹಿತರು (Friends) ಒಟ್ಟಿಗೆ ನಡೆದುಕೊಂಡು ಬರುತ್ತಿದ್ದಾಗ ವಾಗ್ವಾದ ಶುರುವಾಗಿತ್ತು, ಆದರೆ ಇದೇ ವೇಳೆ ಮಾತಿಗೆ ಮಾತು ಬೆಳೆದಿದ್ದು ವಿಕ್ಟರ್ನನ್ನ ಸ್ವತಃ ಆತನ ಸ್ನೇಹಿತನೇ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಕಮ್ಮನಹಳ್ಳಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.
ಇದನ್ನೂ ಓದಿ- ಕರ್ನಾಟಕ ಕಾನೂನು ವಿವಿಯ ಸರ್ವಾಧಿಕಾರಿ ಧೋರಣೆ ಖಂಡಿಸಿ ವಿದ್ಯಾರ್ಥಿಗಳಿಂದ ಸುವರ್ಣ ಸೌಧ ಚಲೋ
ಬೆಂಗಳೂರಲ್ಲೇ ವಾಸ:
ಇನ್ನು ಕೊಲೆಯಾಗಿರುವ ವಿಕ್ಟರ್ ಬೆಂಗಳೂರು ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. 3 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವಿಕ್ಟರ್, ಬೆಂಗಳೂರಿನಲ್ಲೇ ವಾಸ ಮಾಡುತ್ತಿದ್ದ. ಆದರೆ ಸ್ವತಃ ವಿಕ್ಟರ್ನ ಸ್ನೇಹಿತನೇ ಕೊಲೆಗೈದು ಓಡಿ ಹೋಗಿದ್ದು, ಆರೋಪಿಗಾಗಿ ಬಲೆ ಬೀಸಲಾಗಿದೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.