ಹನ್ನೊಂದು ತಿಂಗಳ ಮಗು ತೊಟ್ಟಿಯಲ್ಲಿ ಬಿದ್ದು ಸಾವು

ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಛಾಯಾಗ್ರಾಹಕರಾದ ದೇವರಾಜ್ ಹಾಗೂ ಅನುಷಾ ದಂಪತಿಯ ಮುದ್ದಿನ ಮಗನಾದ ಅಕ್ಷಯ್ (11 ತಿಂಗಳು ) ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದೆ.

Last Updated : Sep 25, 2022, 05:55 PM IST
  • ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ತೊಟ್ಟಿಯಲ್ಲಿ ಬಗ್ಗಿದಾಗ ಮಗುವನ್ನು ಕಂಡು ದಿಗ್ಭ್ರಾಂತರಾಗಿದ್ದಾರೆ.
  • ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನವಾಗಲಿಲ್ಲ.
ಹನ್ನೊಂದು ತಿಂಗಳ ಮಗು ತೊಟ್ಟಿಯಲ್ಲಿ ಬಿದ್ದು ಸಾವು title=

ಶಿಕಾರಿಪುರ: ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಛಾಯಾಗ್ರಾಹಕರಾದ ದೇವರಾಜ್ ಹಾಗೂ ಅನುಷಾ ದಂಪತಿಯ ಮುದ್ದಿನ ಮಗನಾದ ಅಕ್ಷಯ್ (11 ತಿಂಗಳು ) ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದೆ.

ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು ಮಗುವಿನ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಯೋಚಿಸಿದ್ದ ಮನೆಯಲ್ಲಿಗ ಸಂಭ್ರಮದ ಬದಲಾಗಿ ಸ್ಮಶಾನ ಮೌನ ಆವರಿಸಿದೆ.ಮಹಾಲಯ ಅಮವಾಸೆ ಯಾದ ಭಾನುವಾರ ಕುಟುಂಬಸ್ಥರು ವಾಹನ ತೊಳೆಯಲು ಪೂಜೆ ಪುನಸ್ಕಾರದ ಕಡೆ ಗಮನ ಕೊಟ್ಟ ಸಂದರ್ಭ, ಅಂಬೆಗಾಲು ಇಡುತ್ತಿದ್ದ ಮಗು ಅರಿವಿಲ್ಲದಂತೆ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ.

ಇದನ್ನೂ ಓದಿ:Samudrik Shastra: ಈ ರೀತಿ ಹಣೆಯಿರುವ ಹುಡುಗಿಯರು ಗಂಡನಿಗೆ ಅದೃಷ್ಟ ದೇವತೆಯಂತೆ.!

ಸ್ವಲ್ಪ ಹೊತ್ತಿನ ನಂತರ  ಮಗುವಿನ ತಾತ ವಾಹನ ತೊಳೆಯಲು ತೊಟ್ಟಿಯಲ್ಲಿ ಬಗ್ಗಿದಾಗ ಮಗುವನ್ನು ಕಂಡು ದಿಗ್ಭ್ರಾಂತರಾಗಿದ್ದಾರೆ. ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನವಾಗಲಿಲ್ಲ. ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯಾಧಿಕಾರಿಗಳ ತಂಡ ಮಗುವಿನ ಕಳೆಬರಹವನ್ನು ಪೋಷಕರಿಗೆ ನೀಡುವಾಗ ಅಲ್ಲಿ ಸೇರಿದ್ದ ಜನಸ್ತೋಮ ಹಾಗೂ ಕುಟುಂಬಸ್ಥರ ಆಕ್ರಂದನ ನೆರೆದಿದ್ದ ಜನರ ಹೃದಯ ಹಿಂಡುತ್ತಿತ್ತು.

ಇದನ್ನೂ ಓದಿ: Astro Tips : ನಿಮ್ಮ ಅದೃಷ್ಟ ಬದಲಾಯಿಸುತ್ತದೆ ಈ ಹೂವು, ಹೀಗೆ ಬಳಸಿ; ಬಡತನ ತೊಲಗಿ ಧನ ಪ್ರಾಪ್ತಿಯಾಗುತ್ತದೆ

ಮೃತನ ಮೂರು ವರ್ಷದ ಅಕ್ಕ ನಕ್ಷತ್ರ ಹಾಗೂ ತಂದೆ ತಾಯಿಯ ಪಾಡು ಹೇಳತಿರದು. ಭಾನುವಾರ ಸಂಜೆಯೇ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಭಗವಂತನಿಗೆ ಹಿಡಿಶಾಪ ಹಾಕುತ್ತಿದ್ದ ಊರಿನ ಗ್ರಾಮಸ್ಥರ ನಡುವೆಯೇ ಆ ಪುಟ್ಟ ಮಗುವಿನ ಶವ ಸಂಸ್ಕಾರ ನಡೆಯಿತು. ಇಡೀ ಊರಿಗೆ ಊರೇ ಶವಸಂಸ್ಕಾರದಲ್ಲಿ  ಭಾಗಿಯಾಗಿದ್ದು ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ  ಸಂಪೂರ್ಣ ಮೌನ ಆವರಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

 

 

Trending News