ಚುನಾವಣಾ ಆಯೋಗಕ್ಕೆ ತನಿಖಾ ವರದಿ ಸಲ್ಲಿಕೆ

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆ, 8 ವಿಧಾನಪರಿಷತ್ ಸದಸ್ಯರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಬಿಎಂಪಿ ತನ್ನ ಆಂತರಿಕ ವರದಿ ಸಲ್ಲಿಸಿದೆ.

Last Updated : Aug 30, 2017, 10:55 AM IST
ಚುನಾವಣಾ ಆಯೋಗಕ್ಕೆ ತನಿಖಾ ವರದಿ ಸಲ್ಲಿಕೆ title=

ಬೆಂಗಳೂರು : ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆ, 8 ವಿಧಾನಪರಿಷತ್ ಸದಸ್ಯರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಬಿಎಂಪಿ ತನ್ನ ಆಂತರಿಕ ವರದಿ ಸಲ್ಲಿಸಿದೆ.

ಸಚಿವ ಸ್ಥಾನದ ಆಕಾಂಕ್ಷಿ ಆರ್.ಬಿ.ತಿಮ್ಮಾಪುರ ಸೇರಿದಂತೆ ಒಟ್ಟು 8 ವಿಧಾನಪರಿಷತ್ ಸದಸ್ಯರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಅಲ್ಲಂ ವೀರಭದ್ರಪ್ಪ, ರಘು ಆಚಾರ್, ಎನ್.ಎಸ್.ಬೋಸರಾಜ್, ಎಸ್.ರವಿ, ಸಿ.ಆರ್.ಮನೋಹರ್, ಅಪ್ಪಾಜಿಗೌಡ, ಎಂ.ಡಿ.ಲಕ್ಷ್ಮಿ ನಾರಾಯಣ ಮತ್ತು ಆರ್.ಬಿ.ತಿಮ್ಮಾಪುರ ಅವರು ಮೇಯರ್ ಚುನಾವಣೆಯಲ್ಲಿ ಮತದಾನ ಮಾಡುವ ಉದ್ದೇಶದಿಂದ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಪರಿಷತ್ತಿಗೆ ನೀಡಿರುವ ವಿಳಾಸ ಮತ್ತು ಬೆಂಗಳೂರು ಮತದಾರ ಅಂತ ನೀಡಿರುವ ವಿಳಾಸ ಎರಡೂ ವ್ಯತ್ಯಾಸದಿಂದ ಕೂಡಿರುವುದರಿಂದ ಮುಂದಿನ ಕ್ರಮ ಕೈಗೊಳ್ಳಬೇಕಾದ ಪ್ರಕರಣ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ನಡೆಸಿದ ತನಿಖಾ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ತನಿಖಾ ವರದಿಯನ್ನೂ ನಿನ್ನೆ ಸಂಜೆಯೇ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ.

Trending News