ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌.. ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ

Karnataka Budget 2025 latest news: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. 

Written by - Chetana Devarmani | Last Updated : Mar 7, 2025, 12:04 PM IST
  • ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್
  • ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ
  • ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ
ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌.. ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ (Budget) ಮಂಡಿಸಿದರು. ಈ ಬಾರಿ ಬಜೆಟ್‌ನಲ್ಲಿ ಅಂಗನಾವಡಿ ಕಾರ್ಯಕರ್ತೆಯರಿಗೆ ಸಂತಸದ ಸುದ್ದಿಯೊಂದು ದೊರೆತಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳದ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

Add Zee News as a Preferred Source

ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಇದಕ್ಕಾಗಿ ತಲಾ ಒಂದು ಲಕ್ಷ ರೂಪಾಯಿಯಂತೆ ಒಟ್ಟು 175 ಕೋಟಿ ರೂಪಾಯಿ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: Karnataka Budget 2025 LIVE : ದಾಖಲೆಯ 16ನೇ ಬಜೆಟ್ ಪ್ರತಿ ಓದುತ್ತಿರುವ ಸಿಎಂ ಸಿದ್ದರಾಮಯ್ಯ..!

ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂಪಾಯಿ ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ :

ಹೆಚ್ಚಿನ ಟಿಬಿ ಪ್ರಕರಣಗಳಿರುವ ಆರೋಗ್ಯ ಕೇಂದ್ರಗಳಿಗೆ 2025-26ನೇ ಸಾಲಿನಲ್ಲಿ 100 True-NAT machine ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1,000 ರೂ. ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. 

ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ದೃಢಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಚಾರಿ ಆಹಾರ ಪ್ರಯೋಗಾಲಯಗಳ ಮೂಲಕ ಆಹಾರ ಮಾದರಿಗಳನ್ನು ವಿಶ್ಲೇಷಿಸಲಾಗುವುದು. ಅಸುರಕ್ಷಿತ ಮತ್ತು ಕಳಪೆ ಆಹಾರವನ್ನು ಗುರುತಿಸಿ ಕಾನೂನಿನ ಅನುಸಾರ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು. 

ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಗುಣಮಟ್ಟದ ಔಷಧಗಳನ್ನು ವಿತರಿಸಲು KSMSCL ಸಂಸ್ಥೆಯನ್ನು ಬಲಪಡಿಸಲಾಗುವುದು. ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಗಾಗಿ ತಂತ್ರಾಂಶವನ್ನು ಪರಿಚಯಿಸಲಾಗುವುದು ಎಂದು ಬಜೆಟ್‌ ಮಂಡನೆ ವೇಳೆ ತಿಳಿಸಿದ್ದಾರೆ. 

ಇದನ್ನೂ ಓದಿ: ಎಸ್​ಸಿ ಎಸ್​ಟಿ ಸಮುದಾಯಕ್ಕೆ ಬಜೆಟ್‌ನಲ್ಲಿ ​ಭರ್ಜರಿ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News