Bengaluru: ಅಂಗನವಾಡಿ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರ ಆರಂಭವನ್ನು ವಿರೋಧಿಸಿ ಪ್ರತಿಭಟನೆ
ಎಐಟಿಯುಸಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶಿ ಜಯಮ್ಮ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದ್ದು, ಉದ್ಯೋಗಸ್ಥ ಮಹಿಳೆಯರ ಮಕ್ಕಳನ್ನು ನೋಡಿಕೊಳ್ಳುವ ನಿರ್ಧಾರ ಸ್ವಾಗತಿಸುತ್ತೇವೆ. ಆದರೆ ಶಿಶುಪಾಲನಾ ಕೇಂದ್ರಗಳನ್ನು ಪ್ರತ್ಯೇಕವಾಗಿ ತೆರೆದು, ಶಿಕ್ಷಕರು, ಆಯಾಗಳನ್ನು ಪ್ರತ್ಯೇಕವಾಗಿ ನೇಮಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಆಗ್ರಹಿಸಿದ್ದಾರೆ.
Bengaluru: ಬೆಂಗಳೂರಿನ 100 ಅಂಗನವಾಡಿ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರವನ್ನು ಆರಂಭಿಸುವ ಸರ್ಕಾರದ ನಿರ್ಧಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಎಐಟಿಯುಸಿ ಅಂಗನವಾಡಿ ಫೆಡರೇಷನ್ ನೇತೃತ್ವದಲ್ಲಿ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಎಐಟಿಯುಸಿ ಅಂಗನವಾಡಿ (Anganwadi Workers) ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶಿ ಜಯಮ್ಮ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದ್ದು, ಉದ್ಯೋಗಸ್ಥ ಮಹಿಳೆಯರ ಮಕ್ಕಳನ್ನು ನೋಡಿಕೊಳ್ಳುವ ನಿರ್ಧಾರ ಸ್ವಾಗತಿಸುತ್ತೇವೆ. ಆದರೆ ಶಿಶುಪಾಲನಾ ಕೇಂದ್ರಗಳನ್ನು ಪ್ರತ್ಯೇಕವಾಗಿ ತೆರೆದು, ಶಿಕ್ಷಕರು, ಆಯಾಗಳನ್ನು ಪ್ರತ್ಯೇಕವಾಗಿ ನೇಮಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ- ಆಂಧ್ರದಲ್ಲಿ ಗಾಂಜಾ ಬೆಳೆದು, ಕರ್ನಾಟಕದಲ್ಲಿ ಮಾರಾಟ; ಇಬ್ಬರು ಆರೋಪಿಗಳ ಬಂಧನ
ಈಗಿರುವ ಅಂಗನವಾಡಿ ಕೇಂದ್ರಗಳಲ್ಲೇ ಶಿಶುಪಾಲನಾ ಕೇಂದ್ರ (Childcare center) ಆರಂಭಿಸಲು ಜಾಗ ಸಾಲುವುದಿಲ್ಲ. ಈ ಬಗ್ಗೆ ಸಚಿವರ ಗಮನಕ್ಕೆ ತಂದರೂ ನಮ್ಮನ್ನು ಕರೆದು ಚರ್ಚಿಸಿಲ್ಲ. ಅಂಗನವಾಡಿ ಕೇಂದ್ರಗಳು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಕಾರ್ಯ ನಿರ್ವಹಿಸುತ್ತಿವೆ. ಅಂಗನವಾಡಿ ಕೇಂದ್ರಗಳಲ್ಲೇ ಶಿಶುಕೇಂದ್ರಗಳನ್ನೂ ಆರಂಭಿಸಿದರೆ ಅಂಗನವಾಗಿ ಕಾರ್ಯಕರ್ತರು ಹಾಗೂ ಸಹಾಯಕರು ಇನ್ನು ಮುಂದೆ ಬೆಳಗ್ಗೆ 7-30 ರಿಂದ ರಾತ್ರಿ 7 ರವರೆಗೆ ಕೆಲಸ ಮಾಡಬೇಕಾಗ್ತದೆ. ಅಂಗನವಾಡಿ ಕಾರ್ಯಕರ್ತರಿಗೆ 10 ಸಾವಿರ, ಸಹಾಯಕರಿಗೆ 5,250 ರೂ. ಗೌರವ ಧನ ನೀಡಲಾಗುತ್ತಿದೆ. ಇಷ್ಟು ಕಡಿಮೆ ಗೌರವ ಧನದಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದವರು ಅಳಲು ತೋಡಿಕೊಂಡಿದ್ದಾರೆ.
[[{"fid":"228737","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]
170 ಶಿಶುಪಾಲನಾ ಕೇಂದ್ರಗಳನ್ನು ಎನ್‌ಜಿಒ ಮೂಲಕ ಸರ್ಕಾರ ತರಲು ಪ್ರಯತ್ನಿಸುತ್ತಿದೆ. ಆದರೆ ಅದೇ ಅಂಗನವಾಡಿಯಲ್ಲಿ ಕಾರ್ಯಕರ್ತರು ಹಾಗೂ ಸಹಾಯಕರೇ ಉದ್ಯೋಗಸ್ಥ ಮಹಿಳೆಯರ ಮಕ್ಕಳನ್ನು ಬೆಳಗ್ಗೆ 7-8 ಗಂಟೆಯಿಂದಲೇ ನೋಡಿಕೊಳ್ಳಬೇಕಾಗುತ್ತದೆ. 7 ತಿಂಗಳಿಂದ 2 ವರ್ಷದೊಳಗಿನ ಮಕ್ಕಳನ್ನು ಬಿಟ್ಟುಹೋಗುತ್ತಾರೆ. ಇದೇ ಸಂಧರ್ಭದಲ್ಲಿ 3 ರಿಂದ 6 ವರ್ಷದ ಮಕ್ಕಳನ್ನೂ ನೋಡಿಕೊಂಡು ಶಿಕ್ಷಣ, ಆಹಾರ ಕೊಟ್ಟು ಮಲಗಿಸಬೇಕಾಗುತ್ತದೆ.
ಇದನ್ನೂ ಓದಿ- JOBS: ಡೇ-ನಲ್ಮ್ ಯೋಜನೆ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ
ಇದಲ್ಲದೆ, ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರಿಗೆ ಆಹಾರವನ್ನೂ ತಯಾರಿಸಿ ಕೊಡಲಾಗುತ್ತದೆ. ಇದಲ್ಲದೆ ಹಲವಾರು ಸಭೆ, ಸರ್ವೇಗಳು ನಡೆಯುತ್ತಿರುತ್ತವೆ. ಈ ಕೆಲಸದ ಒತ್ತಡದ ಮಧ್ಯೆ ಶಿಶುಪಾಲನಾ ಕೇಂದ್ರ ನಿರ್ವಹಿಸಲು ಕಷ್ಟಸಾಧ್ಯವಾಗಿದ್ದು, ಶಿಶುಪಾಲನಾ ಯೋಜನೆ ಪ್ರಸ್ತಾಪವನ್ನು ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.