ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೇಗೀಡಾದ ಇಬ್ಬರು ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ ಅವರು, ಆ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

Written by - Prashobh Devanahalli | Last Updated : May 20, 2024, 09:03 PM IST
    • ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ
    • ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ ಗೃಹ ಸಚಿವರು
    • ಕೃತ್ಯಕ್ಕೆ ಕಾರಣ ಏನೆಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದ ಡಾ. ‌ಜಿ ಪರಮೇಶ್ವರ್
ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಡಾ.ಜಿ ಪರಮೇಶ್ವರ್ title=
Anjali murder case

ಹುಬ್ಬಳ್ಳಿ: ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ‌ಜಿ ಪರಮೇಶ್ವರ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೇಗೀಡಾದ ಇಬ್ಬರು ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ ಅವರು, ಆ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ: ಒಂದು ಗ್ಲಾಸ್ ನೀರಿಗೆ ಈ ಕಾಳು ಬೆರೆಸಿ ಕುಡಿಯಿರಿ: 7 ದಿನದಲ್ಲಿ ಸೊಂಟದ ಸುತ್ತ ಕಾಡುವ ಮೊಂಡುತನದ ಬೊಜ್ಜು ಕರಗುತ್ತೆ! ನಟಿಯರಂತೆ ಸ್ಲಿಮ್ ಆಗುವಿರಿ

ನೇಹಾ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಅನೇಕ ವಿಚಾರಗಳನ್ನು ತಮ್ಮ ಮುಂದೆ ಹೇಳಲು ಆಗುವುದಿಲ್ಲ. ಇದರಿಂದ ತನಿಖೆಗೆ ಅಡ್ಡಿಯಾಗುತ್ತದೆ. ಕೃತ್ಯಕ್ಕೆ ಕಾರಣ ಏನೆಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದರು.

ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಈ ಎರಡು ಕೊಲೆ‌ ಪ್ರಕರಣಗಳನ್ನು ಸಿಐಡಿಗೆ ವಹಿಸಲಾಗಿದೆ. ಸ್ಥಳೀಯ ಪೊಲೀಸರು ಒತ್ತಡಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಬರಬಹುದು. ಹೀಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದರು.

ವಿಪಕ್ಷದವರು ನೇಹಾ ಹತ್ಯೆ ಪ್ರಕರಣಕ್ಕೆ ರಾಜಕೀಯ ಬಣ್ಣಕಟ್ಟುವ ಪ್ರಯತ್ನ ಮಾಡಿದರು. ಅನೇಕರ ಹೇಳಿಕೆಯನ್ನು ಪೊಲೀಸ್ ಇಲಾಖೆ ಗಮನಿಸಿದೆ. ಪ್ರಕರಣದ ಆರೋಪಿ ಯಾವ ಉದ್ದೇಶಕ್ಕಾಗಿ ಕೃತ್ಯ ಎಸಗಿದ ಎಂಬುದು ತನಿಖೆಯಿಂದ ಹೊರಬರಬೇಕಿದೆ. ಮೂಲಾಂಶವನ್ನು ತನಿಖೆಯಿಂದ ಹೊರತರಬೇಕು ಎಂಬುದು ನಮ್ಮ ಉದ್ದೇಶ. ಇಲಾಖೆ ಆ ಕೆಲಸವನ್ನು ಈಗಾಗಲೇ ಮಾಡುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶ ಎಂದು ಹೇಳಿದರು.

“ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಯುವತಿಯ ಅಜ್ಜಿಯನ್ನು ಮಾತನಾಡಿಸಿದೆ. ದೂರು ಕೊಡಲು ಠಾಣೆಗೆ ಹೋಗಿರುವುದಾಗಿ ಹೇಳಿದರು. ಈ ವೇಳೆ ಅಲ್ಲಿ ಸರಿಯಾಗಿ ಸ್ಪಂದಿಸಿಲ್ಲ. ಅದಕ್ಕೆ ಬೇಸರ ಆಯ್ತು ಎಂದರು. ದೂರು ನೀಡಿದ ಕೂಡಲೇ ಕ್ರಮ ತೆಗೆದುಕೊಂಡಿದ್ದರೆ ಕೃತ್ಯ ಸಂಭವಿಸುತ್ತಿರಲಿಲ್ಲ ಎಂಬುದು ಗೊತ್ತಾಗಿದೆ. ನಿರ್ಲಕ್ಷ್ಯ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತುಗೊಳಿಸಿ, ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಅದರ ವರದಿ ಬಂದ ನಂತರ ಮುಂದಿನ‌ ಕ್ರಮ ಜರುಗಿಸಲಾಗುವುದು. ಯಾರೇ ತಪ್ಪೆಸಗಿದ್ದರು ಸುಮ್ಮನೆ ಬಿಡುವ ಪ್ರಮೇಯವಿಲ್ಲ” ಎಂದು ಎಚ್ಚರಿಸಿದರು.

ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿ, “ಬಿಜೆಪಿಯವರ ಅವಧಿಯಲ್ಲಿ 2021 ಜನವರಿ ತಿಂಗಳಿನಿಂದ ಏಪ್ರಿಲ್‌ವರೆಗೆ (4 ತಿಂಗಳ ಅಂಕಿ-ಅಂಶ) 499 ಕೊಲೆ‌ ಪ್ರಕರಣಗಳು, 2022 ಜನವರಿಯಿಂದ ಏಪ್ರಿಲ್‌ವರೆಗೆ 466, 2023 ಜನವರಿಯಿಂದ ಏಪ್ರಿಲ್‌’ವರೆಗೆ 431, 2024 ಜನವರಿಯಿಂದ ಏಪ್ರಿಲ್‌’‌ವರೆಗೆ 430 ಕೊಲೆ ಪ್ರಕರಣಗಳು ವರದಿಯಾಗಿವೆ. ಈ ಅಂಕಿ-ಅಂಶಗಳನ್ನು ಗಮನಿಸಿದರೆ, ಯಾರ ಅವಧಿಯಲ್ಲಿ ಹೆಚ್ಚು ಕೊಲೆ ಪ್ರಕರಣಗಳು ವರದಿಯಾಗಿವೆ ಎಂಬುದು ಸ್ಪಷ್ಟವಾಗುತ್ತದೆ” ಎಂದರು.

ಕಾನೂನು ಸುವ್ಯವಸ್ಥೆ ಸ್ಥಿರ: ಕೊಲೆ ಪ್ರಕರಣವನ್ನು ಆಧರಿಸಿ ರಾಜ್ಯದಲ್ಲಿ ಕಾನೂನಿನ ಸುವ್ಯವಸ್ಥೆ ಕುಸಿದಿದೆ ಎಂದು ಬಿಂಬಿಸುತ್ತಿರುವುದು ಸರಿಯಲ್ಲ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ದುರುದ್ದೇಶದಿಂದ ಹೇಳಿಕೆ ನೀಡುತ್ತಿದ್ದಾರೆ ಎಂಬುದನ್ನು ಅಂಕಿ-ಅಂಶಗಳು ಹೇಳುತ್ತಿವೆ.‌ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ. ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದರು.

ನಮ್ಮ ಸರ್ಕಾರ ಬಂದ ನಂತರ ರಾಜ್ಯದ ಅನೇಕ ಕಡೆ ನಡೆದ ಗಣೇಶ ಉತ್ಸವ, ಹೋಳಿ ಹಬ್ಬ, ರಂಜಾನ್ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸಿ ಇಲಾಖೆ ಕೆಲಸ ಮಾಡಿದೆ. ಲೋಕಸಭಾ ಚುನಾವಣೆ ರಾಜ್ಯದಲ್ಲಿ ನಡೆದ ಎರಡು ಹಂತಗಳಲ್ಲಿಯೂ ಸುರಕ್ಷಿತವಾಗಿ ಮತದಾನ ನಡೆಸಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಪೆನ್‌ ಡ್ರೈವ್ ಪ್ರಕರಣದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ. ನಮ್ಮ ಪೊಲೀಸರು ಸಮರ್ಥರಾಗಿದ್ದಾರೆ ಎಂದರು.

ಇದನ್ನೂ ಓದಿ: ಈ ಆರೋಗ್ಯ ಸಮಸ್ಯೆಯಿದ್ದವರು ಶುಂಠಿ ಟೀ ಕುಡಿಯಲೇಬಾರದು! ರುಚಿಗಿಂತ ಅಪಾಯವೇ ಹೆಚ್ಚು!

ಕದ್ದಾಲಿಕೆಯಾಗಿದ್ದರೆ ದೂರು ನೀಡಲಿ:

ಫೋನ್ ಟ್ಯಾಪಿಂಗ್ ಆಗಬೇಕಾದರೆ ಸರ್ಕಾರದ ಆದೇಶವಾಗಬೇಕಾಗುತ್ತದೆ. ಹೆಚ್.ಡಿ.ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಯಾಗಿದ್ದರೆ ದೂರು ನೀಡಲಿ. ಕ್ರಮ ಕೈಗೊಳ್ಳುತ್ತೇವೆ. ಸರ್ಕಾರ ಮಾಡಿಸುತ್ತಿದೆ ಎಂಬುದಾದರೆ ದಾಖಲೆ ನೀಡಲಿ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News