ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು : ಬಸವರಾಜ ಬೊಮ್ಮಾಯಿ 

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

Written by - Prashobh Devanahalli | Edited by - Manjunath N | Last Updated : Jun 28, 2023, 10:03 PM IST
  • ರಾಜ್ಯ ಸರ್ಕಾರ ನೀಡುವ 170 ರೂ. ಗ್ರಾಮೀಣ ಮಹಿಳೆಯ ದಿನದ ಕೂಲಿಯ ಅರ್ಧದಷ್ಟು ಹಣವೂ ಆಗುವುದಿಲ್ಲ
  • ಸುಳ್ಳು ಗ್ಯಾರೆಂಟಿ ಗಳನ್ನು ಈಡೇರಿಸಲಾಗದೇ ಈಗ ಜನರಿಗೆ ದ್ರೋಹ ಮಾಡಲಾಗುತ್ತಿದೆ
  • ಚುನಾವಣೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಹತ್ತು ಕೆಜಿ ಅಕ್ಕಿ ಕೊಡಿ
ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು : ಬಸವರಾಜ ಬೊಮ್ಮಾಯಿ  title=
file photo

ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡುವಲ್ಲಿ  ಜನರಿಗೆ ದೋಖಾ ಮಾಡುವುದು ಮುಂದುವರೆಸಿದೆ. ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರೆಂಟಿ ನೀಡಿ ಈಗ ಒಬ್ಬರಿಗೆ 170 ರೂ. ಹಾಕುವುದಾಗಿ ಹೇಳಿರುವುದು ಸರ್ಕಾರದ ವಂಚನೆಯ ಇನ್ನೊಂದು ಮುಖ ಬಯಲಾಗಿದೆ.

ರಾಜ್ಯ ಸರ್ಕಾರ ನೀಡುವ 170 ರೂ. ಗ್ರಾಮೀಣ ಮಹಿಳೆಯ ದಿನದ ಕೂಲಿಯ ಅರ್ಧದಷ್ಟು ಹಣವೂ ಆಗುವುದಿಲ್ಲ. ಸುಳ್ಳು ಗ್ಯಾರೆಂಟಿ ಗಳನ್ನು ಈಡೇರಿಸಲಾಗದೇ ಈಗ ಜನರಿಗೆ ದ್ರೋಹ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಹತ್ತು ಕೆಜಿ ಅಕ್ಕಿ ಕೊಡಿ, ಇಲ್ಲವೇ ಮಾರುಕಟ್ಟೆ ದರದಲ್ಲಿ ಪ್ರತಿ ಕೆಜಿಗೆ 60 ರೂ. ಗಳಂತೆ ಹತ್ತು ಕೆಜಿಗೆ ತಗಲುವ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಿ. ಇಲ್ಲದಿದ್ದರೆ ಮಾತಿಗೆ ತಪ್ಪಿದ್ದಕ್ಕಾಗಿ‌ ಜನರಿಗೆ ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News