ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಅರೆಸ್ಟ್..!

Anna Bhagya rice theft case: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6,077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು. ಈ ಪ್ರಕರಣ ಸಂಬಂಧ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮಣಿಕಂಠ ರಾಠೋಡ್‌ನನ್ನು ಬಂಧಿಸಲಾಗಿದೆ.

Written by - Puttaraj K Alur | Last Updated : Jul 17, 2024, 10:38 PM IST
  • 2 ಕೋಟಿಗೂ ಅಧಿಕ ಮೌಲ್ಯದ 6,077 ಕ್ವಿಂಟಾಲ್ ಅಕ್ಕಿ ಕಳ್ಳತನ ಪ್ರಕರಣ
  • ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ಬಂಧಿಸಿದ ಪೊಲೀಸರು
  • ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ಕಳ್ಳತನವಾಗಿತ್ತು
ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಅರೆಸ್ಟ್..! title=
ಮಣಿಕಂಠ ರಾಠೋಡ್‌ ಬಂಧನ!

Anna Bhagya rice theft case: ಅಕ್ಕಿ ಕಳ್ಳತನ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ(ಜುಲೈ ೧೭) ಕಲಬುರಗಿ ನಗರದ ಭಾರತ ಪ್ರೈಡ್ ಅಪಾರ್ಟ್‌ಮೆಂಟ್‌ನಲ್ಲಿನ ಮನೆಯಿಂದ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿದ್ದಾರೆ. 

ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6,077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮಣಿಕಂಠ ರಾಠೋಡ್‌ನನ್ನು ಬಂಧಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠನ ಸಹೋದರನನ್ನು ಪೊಲೀಸರು ಬಂಧಿಸಿದ್ದರು.  

ಇದನ್ನೂ ಓದಿ: ಖಾಸಗಿ ಕಂಪನಿಯಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು!

ಮಣಿಕಂಠ ರಾಠೋಡ್‌ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು AICC ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಪುತ್ರ ಪ್ರಿಯಾಂಕ್‌ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದ. ಕೋಟ್ಯಂತರ ಮೌಲ್ಯದ ಅಕ್ಕಿ ಕದ್ದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಣಿಕಂಠ ರಾಠೋಡ್‌ಗೆ ಶಹಾಪುರ ಠಾಣೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನಲೆ ಮಣಿಕಂಠನನ್ನು ಅಂತಿಮವಾಗಿ ಬಂಧಿಸುವಲ್ಲಿ ಖಾಕಿಪಡೆ ಯಶಸ್ವಿಯಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ʼಅನ್ನಭಾಗ್ಯʼ ಯೋಜನೆಯ ಮೂಲಕ ಬಡ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಆಹಾರ ಧಾನ್ಯಗಳನ್ನು ನೀಡುತ್ತದೆ. ಆದರೆ ಬಡವರಿಗೆ ತಲುಪಬೇಕಾದ ʼಅನ್ನಭಾಗ್ಯʼ ಅಕ್ಕಿಯನ್ನು ಕೆಲವರು ಕಾಳಸಂತೆಯಲ್ಲಿ ಮಾರಾಟ ಮಾಡುವ ಮೂಲಕ ವಂಚನೆ ನಡೆಸುವ ಪ್ರಕರಣಗಳು ಸಹ ನಡೆಯುತ್ತಿವೆ. 

ಇದನ್ನೂ ಓದಿ: ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಅರೆಸ್ಟ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News