Anna Bhagya rice theft case: ಅಕ್ಕಿ ಕಳ್ಳತನ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ(ಜುಲೈ ೧೭) ಕಲಬುರಗಿ ನಗರದ ಭಾರತ ಪ್ರೈಡ್ ಅಪಾರ್ಟ್‌ಮೆಂಟ್‌ನಲ್ಲಿನ ಮನೆಯಿಂದ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6,077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮಣಿಕಂಠ ರಾಠೋಡ್‌ನನ್ನು ಬಂಧಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠನ ಸಹೋದರನನ್ನು ಪೊಲೀಸರು ಬಂಧಿಸಿದ್ದರು.  


ಇದನ್ನೂ ಓದಿ: ಖಾಸಗಿ ಕಂಪನಿಯಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು!


ಮಣಿಕಂಠ ರಾಠೋಡ್‌ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು AICC ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಪುತ್ರ ಪ್ರಿಯಾಂಕ್‌ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದ. ಕೋಟ್ಯಂತರ ಮೌಲ್ಯದ ಅಕ್ಕಿ ಕದ್ದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಣಿಕಂಠ ರಾಠೋಡ್‌ಗೆ ಶಹಾಪುರ ಠಾಣೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನಲೆ ಮಣಿಕಂಠನನ್ನು ಅಂತಿಮವಾಗಿ ಬಂಧಿಸುವಲ್ಲಿ ಖಾಕಿಪಡೆ ಯಶಸ್ವಿಯಾಗಿದೆ.


ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ʼಅನ್ನಭಾಗ್ಯʼ ಯೋಜನೆಯ ಮೂಲಕ ಬಡ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಆಹಾರ ಧಾನ್ಯಗಳನ್ನು ನೀಡುತ್ತದೆ. ಆದರೆ ಬಡವರಿಗೆ ತಲುಪಬೇಕಾದ ʼಅನ್ನಭಾಗ್ಯʼ ಅಕ್ಕಿಯನ್ನು ಕೆಲವರು ಕಾಳಸಂತೆಯಲ್ಲಿ ಮಾರಾಟ ಮಾಡುವ ಮೂಲಕ ವಂಚನೆ ನಡೆಸುವ ಪ್ರಕರಣಗಳು ಸಹ ನಡೆಯುತ್ತಿವೆ. 


ಇದನ್ನೂ ಓದಿ: ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಅರೆಸ್ಟ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.