ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಅನ್ನಭಾಗ್ಯ ಯೋಜನೆ’ಯ ಜುಲೈ ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಜಮಾ ಆಗಿದೆ. ಇದೀಗ ಆಗಸ್ಟ್ ತಿಂಗಳ ಹಣ ಕೂಡ ಬಿಡುಗಡೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ರಾಜ್ಯ ಸರ್ಕಾರವು ಪ್ರಣಾಳಿಕೆಯಲ್ಲಿ ಪ್ರತಿ ಕುಟುಂಬ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಆದರೆ ಅಕ್ಕಿಯ ಕೊರತೆಯಿಂದ ಸದ್ಯ 5 ಕೆಜಿ ಅಕ್ಕಿ ಮಾತ್ರ ನೀಡಲಾಗುತ್ತಿದೆ. ಇನ್ನುಳಿದ 5 ಕೆಜಿ ಅಕ್ಕಿಗೆ ಪ್ರತಿಯಾಗಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬರಿಗೆ 170 ರೂ. ನೀಡಲಾಗುತ್ತಿದೆ. ಕಾರ್ಡ್‍ನಲ್ಲಿರುವ ಎಲ್ಲಾ ಸದಸ್ಯರ ಒಟ್ಟು ಹಣವನ್ನು ಯಜಮಾನರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ.


ಇದನ್ನೂ ಓದಿ: ಮಂಡ್ಯದಲ್ಲಿ ಮತ್ತಷ್ಟು ʼಕಾವೇರಿʼದ ರೈತರದ ಪ್ರತಿಭಟನೆ


ಸರ್ಕಾರವು ಜುಲೈನಿಂದ  ರಾಜ್ಯದಲ್ಲಿ AAY ಮತ್ತು PHH ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ವಿತರಿಸುವುದಾಗಿ ಘೋಷಿಸಿತ್ತು. ಈ ಅಕ್ಕಿಯ ಅಗತ್ಯವನ್ನು FCIಯಿಂದ OMSS(D) ಅಕ್ಕಿಯನ್ನು ಖರೀದಿಸುವ ಮೂಲಕ ಪೂರೈಸಲು ಯೋಜಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರವು ಜುಲೈ ತಿಂಗಳಿನಿಂದ OMSS(D) ಅಕ್ಕಿಯ ಮಾರಾಟವನ್ನು ಸ್ಥಗಿತಗೊಳಿಸಿದೆ. OMSS(D) ಅಕ್ಕಿಯ ಮಾರಾಟವನ್ನು ಸ್ಥಗಿತಗೊಳಿಸಿದ ಕಾರಣ ರಾಜ್ಯ ಸರ್ಕಾರವು ಜುಲೈನಿಂದ AAY ಮತ್ತು PHH  ಫಲಾನುಭವಿಗಳಿಗೆ ನೇರ ನಗದು ವಗಾ೯ವಣೆ ಪ್ರಾರಂಭಿಸಿತು ಮತ್ತು ಅದೇ ರೀತಿ ಮುಂದುವರಿಯುತ್ತಿದೆ.


ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯ ಹೆಚ್ಚುವರಿ ಪಡಿತರ(DBT)ಕ್ಕೆ ಬದಲಾಗಿ ನೇರ ಹಣ ವರ್ಗಾವಣೆಯನ್ನು ಪಡಿತರದಾರರ ಖಾತೆಗೆ ಆಗಸ್ಟ್ ತಿಂಗಳ ಹಣವನ್ನು ಪಾವತಿಸಲಾಗುತ್ತಿದೆ. ಅರ್ಹ ಪಡಿತರ ಕಾರ್ಡ್‍ಗಳಲ್ಲಿ 10,368,897 ಪಡಿತರ ಕಾರ್ಡ್‍ಗಳಿದ್ದು, ಇದರಲ್ಲಿ 36,936,906 ಅರ್ಹ ಫಲಾನುಭವಿಗಳಿದ್ದಾರೆ. ಇದರಿಂದ ಒಟ್ಟಾರೆ 605 ಕೋಟಿ ರೂ.ಗಳಷ್ಟು ವೆಚ್ಚವಾಗಲಿದೆ. 31 ಜಿಲ್ಲೆಗಳ ಪೈಕಿ  ಬೀದರ್, ಚಿತ್ರದುರ್ಗ, ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳ ಪಡಿತರದಾರದ ಖಾತೆಗೆ ಹಣ ಸಂದಾಯವಾಗಿದ್ದು, ಇನ್ನು 5 ದಿನಗಳಲ್ಲಿ ಎಲ್ಲಾ ಜಿಲ್ಲೆಗಳಿಗೂ ತಲುಪಲಿದೆ.


ಇದನ್ನೂ ಓದಿ: ಬೆಂಗಳೂರು, ತುಮಕೂರು ಸೇರಿದಂತೆ 14 ಸ್ಥಳಗಳಲ್ಲಿ ಮೆಗಾ ರೇಡ್‌


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.