ಗದಗ: ‘ಅನ್ನಭಾಗ್ಯ ಯೋಜನೆ’ಯಡಿ ಅಕ್ಕಿ ವಿತರಿಸಲು ಸಿಎಂ ಸಿದ್ದರಾಮಯ್ಯ ನತೃತ್ವದ ಕಾಂಗ್ರೆಸ್ ಸರ್ಕಾರವು ಹೆಣಗಾಟ ನಡೆಸುತ್ತಿದೆ. ಇನ್ನೊಂದೆಡೆ ಎಗ್ಗಿಲ್ಲದೇ ಅನ್ನಭಾಗ್ಯ ಅಕ್ಕಿಯ ಕಾಳದಂಧೆ ನಡೆಯುತ್ತಿದೆ. ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ಲಾರಿಯನ್ನು ಸ್ಥಳೀಯರು ಹಿಡಿದಿದ್ದಾರೆ.
ಅಕ್ಕಿ ಲಾರಿ ಹಿಡಿದು ಒಪ್ಪಿಸಿದರೂ ಪೊಲೀಸರು ಕೇಸ್ ದಾಖಲಿಸಿಕೊಂಡಿಲ್ಲ. ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ 2 ದಿನಗಳಿಂದ ಲಾರಿ ಇದ್ದರೂ ಪರಿಶೀಲನೆಯ ನೆಪದಲ್ಲಿ ಕೇಸ್ ಮಾಡಲು ಹಿಂದೇಟು ಹಾಕಿದ್ದಾರೆ. 520 ಮೂಟೆಗಳ ಸುಮಾರು 26 ಟನ್ ತೂಕದ ಅಕ್ಕಿಯನ್ನು ಆಂಧ್ರಪ್ರದೇಶ ಮೂಲದ ಲಾರಿ(AP- 27 -TY- 2779)ಯಲ್ಲಿ ಸಾಗಾಟ ಮಾಡಲಾಗುತಿತ್ತು.
ಇದನ್ನೂ ಓದಿ: ಬಿಬಿಎಂಪಿಯ 225 ವಾರ್ಡುಗಳ ಕರಡು ಪಟ್ಟಿ ಬಿಡುಗಡೆ
ಮುಂಡರಗಿ ಗದಗ ರಸ್ತೆಯ ಬರದೂರು ಗ್ರಾಮದ ಬಳಿ ವಾಹನವನ್ನು ತಡೆದು ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆಹಾರ ಇಲಾಖೆಯ ಅಧಿಕಾರಿಗಳು ಲಾರಿ ಪರಿಶೀಲನೆ ಮಾಡಿದರೂ ಕೇಸ್ ದಾಖಲಿಸಲು ಮೀನಾಮೇಷ ಮಾಡಿರೋ ಆರೋಪ ಕೇಳಿಬಂದಿದೆ. ಲಾರಿಯಲ್ಲಿನ ಅಕ್ಕಿ ಮೂಟೆಗಳನ್ನು ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ಅಕ್ರಮದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಶಾಮಿಲಾಗಿದ್ದಾರೆ ಅಂತಾ ಸ್ಥಳೀಯರು ಆರೋಪ ಮಾಡಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ಕಾಳದಂಧೆಯ ಅಕ್ಕಿ ಸಿಕ್ಕರೂ ಅಧಿಕಾರಿಗಳು ಜಾಣಮೌನ ವಹಿಸಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣದ ತನಿಖೆ ತೀವ್ರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.