ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ, ಆನ್‌ಲೈನ್ ತರಗತಿ ಆರಂಭಿಸಿ: ಸಿದ್ದರಾಮಯ್ಯ

ಸಂಘರ್ಷವಿರುವ ಕಾಲೇಜುಗಳಿಗೆ ರಜೆ ನೀಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. ಪರಿಸ್ಥಿತಿಯನ್ನು ನೋಡಿಕೊಂಡು ರಜೆ ನೀಡುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

Written by - Zee Kannada News Desk | Last Updated : Feb 8, 2022, 04:53 PM IST
  • ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಆನ್ಲೈನ್ ತರಗತಿ ಆರಂಭಿಸಬೇಕು
  • ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕಿಳಿದು ಶಾಲಾ-ಕಾಲೇಜುಗಳು ಕದನ ಕಣಗಳಾಗುತ್ತಿರುವುದು ಅಪಾಯಕಾರಿ
  • ರಾಜ್ಯ ಬಿಜೆಪಿ ಸರ್ಕಾರ ಪರಿಸ್ಥಿತಿಯನ್ನು ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ ಅಂತಾ ಸಿದ್ದರಾಮಯ್ಯ ಕಿಡಿ
ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ, ಆನ್‌ಲೈನ್ ತರಗತಿ ಆರಂಭಿಸಿ: ಸಿದ್ದರಾಮಯ್ಯ title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಂಗಳೂರು: ಹಿಜಾಬ್-ಕೇಸರಿ ಶಾಲು ಸಂಘರ್ಷ(Karnataka Hijab Row) ನಡೆಯುತ್ತಿರುವ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಆನ್‌ಲೈನ್ ತರಗತಿಗಳನ್ನು ಆರಂಭಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹಿಜಾಬ್ ವಿವಾದ ವಿಚಾರವಾಗಿ ಮಂಗಳವಾರ ಟ್ವೀಟ್ ಮಾಡಿರುವ ಅವರು, ‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್‌ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai)ಯವರಿಗೆ ಆಗ್ರಹಿಸುತ್ತಿದ್ದೇನೆ’ ಅಂತಾ ಹೇಳಿದ್ದಾರೆ.

‘ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳು(Schools and College) ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡು ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಒಂದು ವಾರ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿಸಿ: ಡಿ.ಕೆ.ಶಿವಕುಮಾರ್

‘ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ‌ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ರಾಜ್ಯ ಬಿಜೆಪಿ ಸರ್ಕಾರ(BJP Government) ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ’ ಅಂತಾ ಅವರು ಕಿಡಿಕಾರಿದ್ದಾರೆ.

‘ಹಿಜಾಬ್ ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್(BC Nagesh) ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ’ ಅಂತಾ ಸಿದ್ದರಾಮಯ್ಯ(Siddaramaiah)ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 2nd PUC Exam 2022 : ದ್ವಿತೀಯ PUC ಪರೀಕ್ಷೆ 2022 ರ ಟೈಮ್ ಟೇಬಲ್ ಬಿಡುಗಡೆ : ಇಲ್ಲಿ ಪರಿಶೀಲಿಸಿ

‘ರಾಜ್ಯದಲ್ಲಿನ ಸದ್ಯದ ಪರಿಸ್ಥಿತಿಯ ಗಂಭೀರತೆಯನ್ನು ಮುಖ್ಯಮಂತ್ರಿಯವರು ಈಗಲಾದರೂ ಅರಿತುಕೊಂಡು, ತಕ್ಷಣ ಮಧ್ಯಪ್ರವೇಶಿಸಿ ಶಾಲಾ‌-ಕಾಲೇಜುಗಳಿಗೆ ರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್‌ಲೈನ್ ತರಗತಿ(Online Class)ಗಳನ್ನು ತಕ್ಷಣ ಶುರು ಮಾಡಬೇಕು’ ಅಂತಾ ಸಲಹೆ ನೀಡಿದ್ದಾರೆ.

ಇನ್ನು ಹಿಜಾಬ್(Hijab Row) ಮತ್ತು ಕೇಸರಿ ಶಾಲು ವಿವಾದ ಹಿನ್ನೆಲೆ ಸಂಘರ್ಷವಿರುವ ಕಾಲೇಜುಗಳಿಗೆ ರಜೆ ನೀಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. ಪರಿಸ್ಥಿತಿಯನ್ನು ನೋಡಿಕೊಂಡು ರಜೆ ನೀಡುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು  Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News