ಕಾಂಗ್ರೆಸ್ ಬಣ ರಾಜಕಾರಣದ ಮತ್ತೊಂದು ಮುಖ ಅನಾವರಣವಾಗಿದೆ: ಬಿಜೆಪಿ

ಡಿಕೆ ಡಿಕೆ ಎಂದು ಘೋಷಣೆ, ಜಮೀರ್ ಅಹ್ಮದ್ ಫೋಟೋ ಪ್ರದರ್ಶಿಸಿದ್ದಕ್ಕೆ ಸಿಟ್ಟಾಗಿದ್ದ ಸಿದ್ದರಾಮಯ್ಯ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದಿದ್ದರು.

Written by - Zee Kannada News Desk | Last Updated : Nov 17, 2021, 12:07 PM IST
  • ಡಿಕೆ ಡಿಕೆ ಘೋಷಣೆ, ಜಮೀರ್ ಫೋಟೋ ಪ್ರದರ್ಶಿಸಿದ್ದಕ್ಕೆ ಸಿದ್ದರಾಮಯ್ಯ ಭಾಷಣ ನಿಲ್ಲಿಸಿದ ವಿಚಾರ
  • ಡಿಕೆ ಡಿಕೆ ಎಂಬ ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೆ ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ?
  • ಕಾಂಗ್ರೆಸ್ ಪಕ್ಷದ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣಗೊಂಡಿದೆ ಎಂದು ಬಿಜೆಪಿ ಟಾಂಗ್
ಕಾಂಗ್ರೆಸ್ ಬಣ ರಾಜಕಾರಣದ ಮತ್ತೊಂದು ಮುಖ ಅನಾವರಣವಾಗಿದೆ: ಬಿಜೆಪಿ title=
ಸಿದ್ದರಾಮಯ್ಯಗೆ ಟಾಂಗ್ ನೀಡಿದ ಬಿಜೆಪಿ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾಂಗ್ರೆಸ್(Congress) ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣಕ್ಕೆ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿತ್ತು. ವೇದಿಕೆ ಮೇಲೆ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಡಿಕೆ ಎಂದು ಕೂಗಿದ್ದರು. ಮತ್ತೆ ಕೆಲವರು ಜಮೀರ್ ಅಹ್ಮದ್ ಫೋಟೋ ಪ್ರದರ್ಶಿಸಿದ್ದರು. ಇದರಿಂದ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದಿದ್ದರು. ಈ ಘಟನೆಯನ್ನು ಪ್ರಸ್ತಾಪಿಸಿ ಕರ್ನಾಟಕ ಬಿಜೆಪಿ ಸಿದ್ದರಾಮಯ್ಯ(Siddaramaiah)ನವರಿಗೆ ಟಾಂಗ್ ನೀಡಿದೆ.

DK-Shivakumar.jpg

ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ(Karnataka BJP), ‘ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ಅರ್ಧಕ್ಕೆ ಭಾಷಣ ಮೊಟಕುಗೊಳಿಸಿ ಹೊರ ನಡೆದಿದ್ದಾರೆ. ಇದಕ್ಕೆ ಕಾರಣ ‘ಡಿಕೆ ಡಿಕೆ’ ಎಂಬ ಘೋಷಣೆ. ಅಲ್ಲಿಗೆ ಕಾಂಗ್ರೆಸ್ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣಗೊಂಡಿದೆ. ಒಡೆದ ಮನೆಯಾಗಿರುವ ಕಾಂಗ್ರೆಸ್‌ನಲ್ಲಿ ಇದು ಸಾಮಾನ್ಯವಲ್ಲವೇ?’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: Taluk Adalitha Soudha: ರಾಜ್ಯದ ಮಿನಿ ವಿಧಾನಸೌಧಗಳಿಗೆ ‘ತಾಲೂಕು ಆಡಳಿತ ಸೌಧ’ವೆಂದು ಮರುನಾಮಕರಣ

‘ಸಿದ್ದರಾಮಯ್ಯನವರೇ ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಪ್ರೇರಕರಾದಿರಿ, ಟಿಪ್ಪು ಜಯಂತಿ ನಡೆಸಿದಿರಿ, ಶಾದಿ ಭಾಗ್ಯ ಕೊಟ್ಟಿರಿ. ಆದರೆ ಫಲವೇನು? ಅಲ್ಪಸಂಖ್ಯಾತರ ಸಮಾವೇಶದಲ್ಲಿ ನಿಮ್ಮ ಜೊತೆ ಅಲ್ಪಸಂಖ್ಯಾತ ಸಮುದಾಯದವರೇ ಇರಲಿಲ್ಲ. ಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಡಿಕೆ ಡಿಕೆ ಎನ್ನುತ್ತಿದ್ದಾರೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

‘ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಅವರು ಸಿದ್ದರಾಮಯ್ಯರನ್ನು ಗುರಿಯಾಗಿಸಿ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೆ #ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ?’ ಎಂದು ಕುಟುಕಿದೆ.

ಇದನ್ನೂ ಓದಿ: Heart Attack: ಪ್ರವಚನ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಜೀವಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ

‘ಮುಸ್ಲಿಮರು ಒಟ್ಟಾಗಬೇಕೆಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಕುರಿತಾದ ವಿವಾದಾತ್ಮಕ ಪಿಸುಮಾತು ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಎಂ.ಎ. ಸಲೀಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ, ವಿ.ಎಸ್.ಉಗ್ರಪ್ಪ(VS Ugrappa) ಅವರಿಗೆ ಬರೇ ನೋಟೀಸ್‌ ನೀಡಿದೆ. ಅಲ್ಪಸಂಖ್ಯಾತರೇ ಕಾಂಗ್ರೆಸ್ ಪಕ್ಷದ ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ’ ಎಂದು ಬಿಜೆಪಿ ಮತ್ತೊಂದು ಟ್ವೀಟ್ ನಲ್ಲಿ ಟೀಕಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News