ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯಶವಂತಪುರ ಠಾಣಾ  ವ್ಯಾಪ್ತಿಯಲ್ಲಿ ಇತ್ತೀಚೆಗಷ್ಟೇ  ವಿದ್ಯುತ್ ತಗುಲಿ ಬಾಲಕನೊಬ್ಬ ಮೃತಪಟ್ಟಿದ್ದನು. ಈ ಘಟನೆ ಮಾಸುವಷ್ಟರಲ್ಲೇ ರಾಜ್ಯ ರಾಜಧಾನಿಯಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿಯಾಗಿದೆ. ಮೃತ ದುರ್ದೈವಿಯನ್ನು ಅಪ್ಪು (25) ಎಂದು ಗುರುತಿಸಲಾಗಿದೆ.


COMMERCIAL BREAK
SCROLL TO CONTINUE READING

ಅಪ್ಪು ಎಂಬ ಯುವಕ ನಗರದ ಹಲಸೂರಿನ ಯಲ್ಲಮ್ಮನ ಕೋಯಿಲ್ ಸ್ಟ್ರೀಟ್‌‌ ಬಳಿಯ ರಾಜಕಾಲುವೆಯಲ್ಲಿ ಮುಂಜಾನೆ 6.30 ರ ಸುಮಾರಿಗೆ ಕಬ್ಬಿಣ ಆಯಲು ಬಂದಿದ್ದ. ಪವರ್ ಲೈನ್ ಕಟ್ ಆಗಿ ರಾಜಕಾಲುವೆಯಲ್ಲಿ ಬಿದ್ದಿದ್ದನ್ನು ಆತ ಗಮನಿಸಿರಲಿಲ್ಲ. ಹೀಗಾಗಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ- ಕಳೆದ 15 ದಿನದಲ್ಲಿ 462 ಮಿ.ಮೀ ಮಳೆಯಾಗುವ ಮೂಲಕ ದಾಖಲೆ ಬರೆದ ಮಳೆರಾಯ


ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹಲಸೂರು ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. 


ಇದನ್ನೂ ಓದಿ- Udupi : ಚಾಕಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿ ಸಾವು!


ಬೆಸ್ಕಾಂ ನಿರ್ಲಕ್ಷದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಕುಟುಂಬಸ್ಥರು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ದಿನದ ಹಿಂದೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು ಕಂಡು ಬಂದಿದೆ. ಆದರೆ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ‌. ಹೀಗಾಗಿ ಅಪ್ಪು ಮೃತಪಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.