ಮೂಡಾ ಬಳಿಕ ಮತ್ತೊಂದು ಹೊಸ ಭೂ ಹಗರಣದ ಸದ್ದು : ಕೆಐಎಡಿಬಿ ಹಂಚಿಕೆಯಲ್ಲಿ ಖರ್ಗೆ ಕುಟುಂಬ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಆರೋಪ
ಈ ಭೂಮಿಯನ್ನು ನಿಗದಿತ ಬೆಲೆಗೆ ಯಾವುದೇ ರಿಯಾಯಿತಿಗಳಿಲ್ಲದೆ ಟ್ರಸ್ಟ್ ಗೆ ಒದಗಿಸಲಾಗಿದೆ. ಅಲ್ಲದೆ ಭೂಮಿ ಹಂಚಿಕೆ ಮಾಡುವಾಗ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎನ್ನುವುದನ್ನು ಕರ್ನಾಟಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟವಾಗಿ ಹೇಳಿದ್ದಾರೆ.
ಬೆಂಗಳೂರು : ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ನೇತೃತ್ವದ ಟ್ರಸ್ಟ್‌ಗೆ ಹಂಚಿಕೆ ಮಾಡುವಲ್ಲಿ ಕಾಂಗ್ರೆಸ್ ಪಕ್ಷವು ಒಲವು ತೋರುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.ಈ ಮೂಲಕ ಭೂ ಹಂಚಿಕೆ ಕುರಿತು ರಾಜ್ಯದಲ್ಲಿ ಹೊಸ ವಿವಾದ ಸೃಷ್ಟಿಯಾಗಿದೆ. ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ನೇತೃತ್ವದ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ 2024ರ ಮಾರ್ಚ್‌ನಲ್ಲಿ ನಿವೇಶನ ಹಂಚಲಾಗಿದೆ ಎಂದು ಆರೋಪಿಸಲಾಗಿದೆ.
ಆದರೆ, ಈ ಭೂಮಿಯನ್ನು ನಿಗದಿತ ಬೆಲೆಗೆ ಯಾವುದೇ ರಿಯಾಯಿತಿಗಳಿಲ್ಲದೆ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಒದಗಿಸಲಾಗಿದೆ, ಇದರಲ್ಲಿ ಯಾವ ರೀತಿಯಲ್ಲಿಯೂ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಕರ್ನಾಟಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟ ಪಡಿಸಿದ್ದಾರೆ. 5 ಎಕರೆ ಜಾಗವು ಏರೋಸ್ಪೇಸ್ ಪಾರ್ಕ್‌ನಲ್ಲಿ ನಾಗರಿಕ ಸೌಲಭ್ಯಗಳಿಗಾಗಿ ಗೊತ್ತುಪಡಿಸಿದ 45.94 ಎಕರೆಗಳ ಭಾಗವಾಗಿದೆ ಮತ್ತು ಇದನ್ನು ಪರಿಶಿಷ್ಟ ಜಾತಿ ಕೋಟಾದ ಅಡಿಯಲ್ಲಿ ಹಂಚಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ನಿಮ್ಮ ದ್ವೇಷದ ಕನ್ನಡ ಕಳಚಿ ಸರಿಯಾಗಿ ಕಣ್ಣು ಬಿಟ್ಟು ನೋಡಿ
ಮಲ್ಲಿಕಾರ್ಜುನ ಖರ್ಗೆ ಅವರ ಮತ್ತೊಬ್ಬ ಪುತ್ರ ಹಾಗೂ ಕರ್ನಾಟಕದ ಐಟಿ/ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಮಾಡಿರುವ ಆರೋಪವನ್ನು ತಳ್ಳಿಹಾಕಿದ್ದಾರೆ.
ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ನ ಟ್ರಸ್ಟಿಯೂ ಆಗಿರುವ ಪ್ರಿಯಾಂಕ್,ಕೆಐಎಡಿಬಿ ಹಂಚಿಕೆಯಲ್ಲಿ ಪ್ರಮಾಣಿತ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ ಎಂದು ಹೇಳಿದ್ದಾರೆ. ಜುಲೈ 1994 ರಲ್ಲಿ ರಚನೆಯಾದ ಟ್ರಸ್ಟ್,ರಾಹುಲ್ ಖರ್ಗೆ ಮತ್ತು ಖರ್ಗೆ ಅವರ ಅಳಿಯ, ಸಂಸದ ರಾಧಾಕೃಷ್ಣ ಮೊದಲಾದ ಟ್ರಸ್ಟಿಗಳನ್ನು ಒಳಗೊಂಡಿದೆ.
ಇದನ್ನೂ ಓದಿ : ಎಫ್ ಐ ಆರ್ ನಲ್ಲಿ ಜೈಲು ಸಿಬ್ಬಂಧಿ ಜೊತೆ ದರ್ಶನ್ ಹೆಸರು ಉಲ್ಲೇಖ
ಈ ವಿವಾದದ ಬಗ್ಗೆ ಬಿಜೆಪಿ ರಾಜ್ಯಸಭಾ ಸಂಸದ ಲಹರ್ ಸಿಂಗ್ ಸಿರೋಯಾ ಮೊದಲು ಬೆಳಕು ಚೆಲ್ಲಿದರು.ಭೂಮಿ ಹಂಚಿಕೆಯಲ್ಲಿ ಅಧಿಕಾರದ ದುರುಪಯೋಗ, ಸ್ವಜನಪಕ್ಷಪಾತ ಮತ್ತು ಹಿತಾಸಕ್ತಿ ಅಡಗಿದೆಯೇ ಎಂದು ಪ್ರಶ್ನಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,'ಹಂಚಿಕೆ ಮಾಡಿರುವ ನಿವೇಶನ ಕೈಗಾರಿಕಾ ಅಥವಾ ವಾಣಿಜ್ಯ ಉದ್ದೇಶಕ್ಕೆ ಮೀಸಲಾದ ಕೈಗಾರಿಕಾ ಪ್ಲಾಟ್ ಅಲ್ಲ. ಇದು ಶೈಕ್ಷಣಿಕ ಉದ್ದೇಶಕ್ಕಾಗಿ ಪಡೆಯಲಾಗಿದೆ. ಸಿಎ ಸೈಟ್‌ನಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸುವುದು ಟ್ರಸ್ಟ್‌ನ ಉದ್ದೇಶವಾಗಿದೆ.KIADB CA ಸೈಟ್‌ಗಾಗಿ ಟ್ರಸ್ಟ್‌ಗೆ ಯಾವುದೇ ಸಬ್ಸಿಡಿಯನ್ನು ನೀಡಿಲ್ಲ ಅಥವಾ ಸೈಟ್‌ನ ವೆಚ್ಚವನ್ನು ಕಡಿಮೆ ಮಾಡಿಲ್ಲ ಅಥವಾ ಪಾವತಿ ನಿಯಮಗಳ ಯಾವುದೇ ಸಡಿಲಿಕೆಯನ್ನು ಒದಗಿಸಿಲ್ಲ ಎಂದು ಹೇಳಿದ್ದಾರೆ.
ಇನ್ನು ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಚಿವ ಪಾಟೀಲ್, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿರುವ ಭೂಮಿಯೊಂದಿಗೆ ಕೆಐಎಡಿಬಿ ನಿಯಮಗಳ ಪ್ರಕಾರ ಹಂಚಿಕೆ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ಕೆಐಎಡಿಬಿ ನಿಯಮಾವಳಿಗಳ ಅಡಿಯಲ್ಲಿ ಶಿಕ್ಷಣ ಮತ್ತು ತಾಂತ್ರಿಕ ಸಂಸ್ಥೆಗಳು ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಇಂತಹ ಪ್ಲಾಟ್‌ಗಳನ್ನು ಬಳಸಬಹುದು ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ಅವರು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ರಾಜೀನಾಮೆಗೆ ಒತ್ತಾಯಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.