ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು.ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡುಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡಿತ್ತು.ನಮ್ಮ ಸರ್ಕಾರ ಆ ಕರಡನ್ನು ತಿರಸ್ಕರಿಸಿತ್ತು. ಈಗ ಮತ್ತೆ ಬಿಜೆಪಿ ಅದಕ್ಕೆ ಜೀವ ನೀಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.


Anti Conversion Law: "ಬಿಜೆಪಿ ಮತ್ತು ಜೆಡಿಎಸ್ ನವರು ತಮ್ಮ ಪಾಪವನ್ನು ನಮ್ಮ ತಲೆಗೆ ಕಟ್ಟುತ್ತಿದ್ದಾರೆ"


COMMERCIAL BREAK
SCROLL TO CONTINUE READING

ಈ ಹಿಂದಿನ ಕರಡು ಪ್ರತಿಗೂ, ಈಗಿನ ಕರಡು ಮಸೂದೆಗೂ ಬಹಳಷ್ಟು ವ್ಯತ್ಯಾಸಗಳಿವೆ. ಮದುವೆ ಎಂಬ ಪದ ಹೊಸದಾಗಿ ಸೇರಿಸಲಾಗಿದೆ, ಸಾಕ್ಷಾಧಾರ ಕೊರತೆ ಎದುರಾದಾಗ ದೂರುದಾರರಿಗೆ ಅನುಕೂಲವಾಗುವಂತೆ ನಿಯಮ ರೂಪಿಸಲಾಗಿದೆ. ಸಾಮಾನ್ಯರು ಮತಾಂತರವಾದಾಗ ಒಂದು ಶಿಕ್ಷೆ, ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಅಪ್ರಾಪ್ತರು, ಬುದ್ದಿಭ್ರಮಣೆಯಾದವರನ್ನು ಮತಾಂತರ ಮಾಡಿದಾಗ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಆದರೆ ಇಂತಹುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಕಾನೂನಿನ ಎದುರು ಸರ್ವರೂ ಸಮಾನರು" ಎಂದು ಹೇಳಿದರು.


ಇದನ್ನೂ ಓದಿ: ​ಕರ್ನಾಟಕ ಬಂದ್ ಬೆಂಬಲಿಸುವಂತೆ 'ಗುಲಾಬಿ' ಕೊಟ್ಟು ವಿನಂತಿ..!


"ಕಾನೂನು ಇಲಾಖೆ ಮೂಲಕ ಬಂದಿದ್ದ ಮತಾಂತರ ನಿಷೇಧ ಕಾಯ್ದೆಯ ಕರಡನ್ನು ನಮ್ಮ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಹೆಚ್.ಆಂಜನೇಯ ಅವರು ಸಂಪುಟದ ಮುಂದೆ ತರುವ ಅಗತ್ಯವಿಲ್ಲ ಎಂದು ಷರಾ ಬರೆದು ತಿರಸ್ಕರಿಸಿದ್ದರು.ತಿರಸ್ಕೃತಗೊಂಡ ಕರಡು ಕಾಯ್ದೆ ನಮ್ಮ ಸರ್ಕಾರದ ಕಾಲಾವಧಿಯಲ್ಲಿ ಮತ್ತೆಂದೂ ಚರ್ಚೆಗೆ ಬರಲಿಲ್ಲ. ನಮಗೆ ಇಂಥದ್ದೊಂದು ಕಾಯ್ದೆ ತರುವ ಬಗ್ಗೆ ಕಾಳಜಿ ಇದ್ದಿದ್ದರೆ 2015 ರ ನವೆಂಬರ್ ನಲ್ಲಿ ಸಹಿ ಹಾಕಿ ಸಂಪುಟ ಚರ್ಚೆಗೆ ಕಳುಹಿಸಿದ್ದ ಕಡತ, ತಿರಸ್ಕಾರಗೊಂಡ ನಂತರ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದರ ಕಡೆ ಗಮನ ನೀಡದೆ ಇರುತ್ತಿದ್ದೆವಾ? "ಎಂದು ಅವರು ಪ್ರಶ್ನಿಸಿದರು.


ಇದನ್ನೂ ಓದಿ: ​ಮತಾಂತರ ವಿರೋಧಿ ಮಸೂದೆಯನ್ನು ಅಂಗೀಕರಿಸಿದ ರಾಜ್ಯ ವಿಧಾನಸಭೆ


"ಮತಾಂತರ ನಿಷೇಧ ಕಾಯ್ದೆ ಆರ್ ಎಸ್ ಎಸ್ ಕೈವಾಡದಿಂದ ರೂಪುಗೊಂಡಿದ್ದರಲ್ಲಿ ಅನುಮಾನವೇ ಇಲ್ಲ. ಗುಜರಾತ್, ಉತ್ತರ ಪ್ರದೇಶ ಮತ್ತು ಕರ್ನಾಟಕ ಎಲ್ಲಾ ರಾಜ್ಯಗಳ ಕಾನೂನು ಒಂದೇ ರೀತಿಯ ಪದಬಳಕೆಯಿಂದ ಕೂಡಿದೆ. ಒಬ್ಬರೇ ಮೂರೂ ಕರಡು ಕಾಯ್ದೆಗಳನ್ನು ತಯಾರು ಮಾಡಿದಂತಿದೆ" ಎಂದು ಅವರು ಆರೋಪಿಸಿದರು.


"ನಾವು ಸಂವಿಧಾನದ ಆಶಯಕ್ಕನುಗುಣವಾಗಿ ಕಾಯ್ದೆಯನ್ನು ವಿರೋಧ ಮಾಡಿದ್ದೇವೆ. ಯಾರ ಪರ-ವಿರೋಧವೂ ಇಲ್ಲ. ಇದು ಒಂದೆರಡು ಧರ್ಮಗಳನ್ನು ಗುರಿಯಾಗಿರಿಸಿರುವ ಕಾನೂನು. ನಿರುದ್ಯೋಗ, ಭ್ರಷ್ಟಾಚಾರ, ಅತಿವೃಷ್ಟಿ ಪರಿಹಾರ, ಬೆಲೆಯೇರಿಕೆ ಹೀಗೆ ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದಾವೆ, ಇವುಗಳಿಂದ ಜನರನ್ನು ವಿಮುಖಗೊಳಿಸಲು ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರ್ಕಾರದ ಜಾರಿಗೊಳಿಸಲು ಹೊರಟಿದೆ ಎಂದು ಅವರು ಕಿಡಿಕಾರಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.