ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ.


COMMERCIAL BREAK
SCROLL TO CONTINUE READING

ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ವಿದೀಯಕಕ್ಕೆ ಅನುಮೋದನೆ ಸಿಕ್ಕಿದ್ದು, ನಂತರ ವಿಧಾನ ಪರಿಷತ್ ನಲ್ಲಿ ವಿದೀಯಕ ಮಂಡಿಸಿದ್ದು ಚರ್ಚೆಗೆ ಈವರೆಗೆ ಅನುಮೋದನೆ ಕೈಗೆತುಕೊಂಡಿಲ್ಲ.ಈ ಹಿನ್ನಲೆಯಲ್ಲಿ ನಾಳೆ (ಗುರುವಾರ) ನಡೆಯಬೇಕಿರುವ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನ ಸುಗ್ರೀವಾಜ್ಞೆ ಮೂಲಕ ಅನುಮೋದನೆ ನೀಡಿ, ಅಧ್ಯಾದೇಶ ಮೂಲಕ ರಾಜ್ಯಪಾಲರಿಗೆ ರವಾನಿಸುವ ಸಚಿವ ಸಂಪುಟ ಉಪಸಮ್ಮಿತಿ ಸಭೆಯಲ್ಲಿ ಕೈಕೊಳ್ಳಲಾಗುವುದು, ಇದಕ್ಕೆ ಗೃಹ ಇಲಾಖೆ ಹಾಗೂ ಕಾನೂನು ಇಲಾಖೆ ಮುಂದಾಗಿದೆ.ಬೊಮ್ಮಾಯಿ ಸರ್ಕಾರ ‘ರಾಜ್ಯವನ್ನು ಮಾರಾಟಕ್ಕೆ’ ಇಟ್ಟಿದೆ!: ಕಾಂಗ್ರೆಸ್ ಟೀಕೆ


ಜೂನ್ ನಲ್ಲಿ ನಡೆಯಬೇಕಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿಗೆ ಬಹುಮತ ಸಿಗುವ ಸಾಧ್ಯತೆ ಇರುವ ಹಿನ್ನಲೆ,ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಕಾಯ್ದೆಯನ್ನ ಅಂಗೀಕರಿಸುವ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ.


ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಪರೀಕ್ಷೆ ಮೇಲೆ ಹದ್ದಿನ ಕಣ್ಣು: ಗೃಹ ಇಲಾಖೆ ಜೊತೆ ಸಭೆ ನಡೆಸಿದ ಶಿಕ್ಷಣ ಸಚಿವರು


ರಾಜ್ಯಾದ್ಯಂತ ಕೋಮು ಸೌಹಾರ್ದತೆ ಮತ್ತು ಧಾರ್ಮಿಕ ಅಸಹಿಷ್ಣುತೆ ಹೆಚ್ಚಿರುವ ಸಂದರ್ಭದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧ್ಯಾದೇಶದ ಮೂಲಕ ಜಾರಿಗೊಳಿಸಲು ಮುಂದಾಗಿರುವುದು ಹಾಲಿ ಕೋಮು ವಿಚಾರಗಳಿಗೆ ಧಾರ್ಮಿಕ ಅಸಹಿಷ್ಣುತೆ ಹೆಚ್ಚುವ ಪ್ರಯತ್ನ ಬಿಜೆಪಿ ಮಾಡಲಿದೆ. ಈ ಮೂಲಕ ಹಿಂದೂ ಮತ ಬ್ಯಾಂಕ್ ಕೃಡಿಕರಣ ಮಾಡಲು ಬಿಜೆಪಿ ತಂತ್ರ ರೂಪಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.