CM Ibrahim : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜೆಡಿಎಸ್‌ನಿಂದ ಸಿ.ಎಂ. ಇಬ್ರಾಹಿಂ ಉಚ್ಛಾಟನೆ..!

CM ibrahim Expelled : ಪಕ್ಷದ ಹಿತಕ್ಕಾಗಿ ಅವರ ಸಮ್ಮುಖದಲ್ಲಿಯೇ ಕೈಗೊಂಡ ನಿರ್ಧಾರವನ್ನು ಅವರು ವಿರೋಧಿಸಿ, ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅಪಪ್ರಚಾರ ನಡೆಸಿದರು. ಇದರಿಂದ ಪಕ್ಷದ ವರ್ಚಸ್ಸು, ಹಿತಕ್ಕೆ ಧಕ್ಕೆ ಆಗಿದೆ. ಈ ನಿಟ್ಟಿನಲ್ಲಿ ಉಚ್ಛಾಟನೆಯ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್‌.ಡಿ. ದೇವೇಗೌಡರು ತಿಳಿಸಿದರು.

Written by - Krishna N K | Last Updated : Dec 9, 2023, 04:33 PM IST
  • ಜೆಡಿಎಸ್‌ ಪಕ್ಷದಿಂದ ಸಿಎಂ ಇಬ್ರಾಹಿಂದ ಉಚ್ಛಾಟನೆ
  • ಪಕ್ಷದ ಹಿತಕ್ಕಾಗಿ ಕೈಗೊಂಡ ನಿರ್ಧಾರ
  • ಮಾಜಿ ಪ್ರಧಾನ ಹೆಚ್‌ಡಿ ದೇವೇಗೌಡ ಮಾಹಿತಿ
CM Ibrahim : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜೆಡಿಎಸ್‌ನಿಂದ ಸಿ.ಎಂ. ಇಬ್ರಾಹಿಂ ಉಚ್ಛಾಟನೆ..! title=

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ  ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ತಿಳಿಸಿದರು.

ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇಬ್ಬರು ನಾಯಕರ ಉಚ್ಛಾಟನೆ ನಿರ್ಧಾರವನ್ನು ಪ್ರಕಟಿಸಿದರು. ಪಕ್ಷದ ಹಿತಕ್ಕಾಗಿ ಅವರ ಸಮ್ಮುಖದಲ್ಲಿಯೇ ಕೈಗೊಂಡ ನಿರ್ಧಾರವನ್ನು ಅವರು ವಿರೋಧಿಸಿ, ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅಪಪ್ರಚಾರ ನಡೆಸಿದರು. ಇದರಿಂದ ಪಕ್ಷದ ವರ್ಚಸ್ಸು, ಹಿತಕ್ಕೆ ಧಕ್ಕೆ ಆಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆದು ಉಚ್ಛಾಟನೆಯ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಇದನ್ನೂ ಓದಿ: ಹಿರಿಯ ನಟಿ ಲೀಲಾವತಿ ಪರಿಪೂರ್ಣ ಕಲಾವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅವರು, ಇಬ್ರಾಹಿಂ ಅವರನ್ನು ಹಾಗೂ ಪಶ್ಚಿಮ ಬಂಗಾಳ ಜೆಡಿಎಸ್ ಘಟಕದ ಅಧ್ಯಕ್ಷ ಪುನೀತ್ ಕುಮಾರ ಸಿಂಗ್ ಅವರು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕೇರಳದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ನಿರ್ಣಯವನ್ನು ಕಾರ್ಯಕಾರಿಣಿ ಸಭೆಯಲ್ಲಿ ಮಂಡನೆ ಮಾಡಿದ್ದರು. ಈ ಇಬ್ಬರು ಮಂಡಿಸಿದ ನಿರ್ಣಯಗಳನ್ನು ಕಾರ್ಯಕಾರಿಣಿಯೂ ಸರ್ವಾನುಮತದಿಂದ ಅಂಗೀಕಾರ ಮಾಡಿತು.

ಎಲ್ಲಾ ರಾಜ್ಯ ಘಟಕಗಳ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರ ಹಾಜರಿ: ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜತೆಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸೇರಿದಂತೆ ಎಲ್ಲಾ ರಾಜ್ಯಗಳ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News