ಪಕ್ಷ ವಿರೋಧಿ ಚಟುವಟಿಕೆ; ಮಹಾಲಕ್ಷ್ಮಿ ಲೇಔಟ್ ನ ಯಶೋಧಾ ರಾಜಣ್ಣ ಜೆಡಿಎಸ್ ನಿಂದ ಸಸ್ಪೆಂಡ್
ಮಹಾಲಕ್ಷ್ಮಿ ಲೇಔಟ್ ನ ಜೆಡಿಎಸ್ ಪಕ್ಷದ ಮುಖಂಡರು ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದರು.
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್ ನ ಯಶೋಧಾ ರಾಜಣ್ಣ ಅವರನ್ನು ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ (JDS Primary Membership) ಅಮಾನತು ಮಾಡಲಾಗಿದೆ. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು ಈ ಬಗ್ಗೆ ಆದೇಶ ಹೊರಡಿಸಿ ಮಾಹಿತಿ ನೀಡಿದ್ದಾರೆ.
ಯಶೋಧಾ ರಾಜಣ್ಣ ಅವರು ಕಳೆದ ಹಲವು ದಿನಗಳಿಂದ ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆ (Anti Party Activity) ನಡೆಸಿಕೊಂಡು ಬಂದಿದ್ದರು. ಈ ಬಗ್ಗೆ ಹಲವಾರು ಬಾರಿ ಅವರಿಗೆ ಎಚ್ಚರಿಕೆಯನ್ನೂ ನೀಡಲಾಗಿತ್ತು. ಆದರೂ ಅವರು ಪಕ್ಷದ ಆದೇಶವನ್ನು ಧಿಕ್ಕರಿಸಿ ಪಕ್ಷ ವಿರೋಧಿ ಕೃತ್ಯಗಳನ್ನು ಮುಂದುವರಿಸಿದ್ದರು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ- ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
ಅಲ್ಲದೆ, ಮಹಾಲಕ್ಷ್ಮಿ ಲೇಔಟ್ (Mahalakshmi Layout)ನ ಜೆಡಿಎಸ್ ಪಕ್ಷದ ಮುಖಂಡರು ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದರು.
ಇದನ್ನೂ ಓದಿ- ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರಿಗೆ 'ಬಂಡ್ರಿ ನರಸಪ್ಪ ಸಮಾಜಮುಖಿ ಶ್ರಮಜೀವಿ ಪ್ರಶಸ್ತಿ'
ಈ ಹಿನ್ನೆಲೆಯಲ್ಲಿ ಯಶೋಧಾ ರಾಜಣ್ಣ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ರಮೇಶ್ ಗೌಡ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.