ಬೆಳಗಾವಿ : ರಾಜಕೀಯ ಒತ್ತಡದಿಂದಾಗಿ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ಯೂಟರ್ನ್ ತೆಗೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಅನ್ವರ್ ಮಾಣಿಪ್ಪಾಡಿ ತಮ್ಮ ಹೇಳಿಕೆ ಬದಲಿಸಿರುವ ಪ್ರತಿಕ್ರಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಅಧ್ಯಕ್ಷರ ಹೇಳಿಕೆ ವಿಡಿಯೋಗಳನ್ನು ನಾನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವರನ್ನು ಗಮನಿಸಿದ್ದೇನೆ. ಅನೇಕ ವಿಚಾರಗಳು ಅವರ ಬಾಯಲ್ಲೇ ಬಂದಿವೆ. ತಮ್ಮ ವಿಚಾರವನ್ನು ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಗಳಿಗೆ ಪತ್ರ ಬರೆದು ತಿಳಿಸಿರುವುದಾಗಿ ಹೇಳಿದ್ದರು. ಅವರು ಹೇಳಿರುವ ವಿಚಾರಗಳನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದ್ದಾರೆ. ಈ ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ. ನಾವು ದಾಖಲೆ ಬಿಡುಗಡೆ ಮಾಡುವ ಮುನ್ನ ಅವರೇ ಈ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ತಿಳಿಸಿದ್ದಾರೆ. 


ಇದನ್ನೂ ಓದಿ : ಬೆಂಗಳೂರಿನ ಸಮಸ್ಯೆ ಪರಿಹಾರಕ್ಕೆ ಬೆಸ್ಟ್ ಐಡಿಯಾ ನೀಡಿದ ಐವರಿಗೆ ಸಿಕ್ತು 10 ಲಕ್ಷ: ಇದು ನಿಖಿಲ್ ಕಾಮತ್ ಯೋಜನೆ


ಈ ಪ್ರಕರಣದ ಎಲ್ಲಾ ವಿಚಾರ ನಮ್ಮ ಕಣ್ಮುಂದೆ ಇದೆ. ಸಿಬಿಐನವರು ಈ ಪ್ರಕರಣದ ತನಿಖೆ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಿ. ನಂತರ ನಾವು ಆಲೋಚನೆ ಮಾಡುತ್ತೇವೆ. ನಾವಾಗಿ ಸಿಬಿಐ ತನಿಖೆಗೆ ನೀಡುವುದಿಲ್ಲ ಎಂದು ಬಿಜೆಪಿ ಅವರಿಗೆ ಗೊತ್ತಿದೆ ಹೀಗಾಗಿ ಅವರು ಸಿಬಿಐ ತನಿಖೆಗೆ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. 


ಕಾಂಗ್ರೆಸ್ ನಾಯಕರು ನನಗೆ ಆಫರ್ ಕೊಟ್ಟಿದ್ದಾರೆ ಎಂಬ ಅನ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಈ ವಿಚಾರವನ್ನು ಮೊದಲೇ ಹೇಳಬೇಕಿತ್ತು.ಯಾರೆಲ್ಲಾ ಆಫರ್ ಕೊಟ್ಟಿದ್ದರು ಎಂದು ಆಗ ಹೇಳದೆ, ಈಗ ಹೇಳಿದರೆ ಏನು ಪ್ರಯೋಜನ? ಅಧಿಕಾರ ಇದ್ದಾಗ ಏನು ಹೇಳುತ್ತೇವೆ ಎಂಬುದು ಮುಖ್ಯ" ಎಂದು ಡಿಕೆಶಿ ತಿಳಿಸಿದ್ದಾರೆ. 


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.