ಅನ್ಯಭಾಗ್ಯ ಯೋಜನೆ: ಫಲಾನುಭವಿಗಳು ಪರಿಶೀಲಿಸಬೇಕಾದ ದಾಖಲೆಗಳ ಪಟ್ಟಿ ಇಲ್ಲಿದೆ..!
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಬದಲು ರೂ.34 ರಂತೆ ನೇರ ನಗದು ಪಾವತಿಯಾಗದ ಫಲಾನುಭವಿಗಳು ಹಣ ಬರಲು ಪೂರಕ ಪರಿಶೀಲಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಬದಲು ರೂ.34 ರಂತೆ ನೇರ ನಗದು ಪಾವತಿಯಾಗದ ಫಲಾನುಭವಿಗಳು ಹಣ ಬರಲು ಪೂರಕ ಪರಿಶೀಲಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Crime News: ಪ್ರಿಯಕರನೊಂದಿಗೆ ಬೆಡ್ ರೂಮ್‌ನಲ್ಲಿದ್ದಾಗ ಬಂದ ಪತಿಯ ಕೊಂದ ಪತ್ನಿ.. ಹೃದಯಾಘಾತ ಎಂದು ಹೈಡ್ರಾಮಾ!
ಫಲಾನುಭವಿಗಳು ಪರಿಶೀಲಿಸಬೇಕಾದ ದಾಖಲೆಗಳು:
ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ಆಧಾರ್ ಕಾರ್ಡ್‍ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಬೇಕು. ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
ಇದನ್ನೂ ಓದಿ: ಟ್ರಾಫಿಕ್ ಕಂಟ್ರೋಲ್‌ಗೆ ಸಹಕಾರಿ ಈ ರಿಂಗ್‌ರೈಲ್ ಯೋಜನೆ
ಬ್ಯಾಂಕ್ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ (ಪೋಸ್ಟ್ ಆಫೀಸ್) ಹೊಸ ಐ.ಬಿ.ಪಿ.ಬಿ ಖಾತೆ ತೆರೆಯಬೇಕು. ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ತಮ್ಮ ಖಾತೆಗೆ ಹಣ ಜಮೆಯಾಗಲಿದೆ. ಅರ್ಹರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕಿನ ಆಹಾರ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂ.08392-272557 ಗೆ ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.