ಲೋಕಸಭೆ ಚುನಾವಣೆ ಬಳಿಕ ಈ ಸರ್ಕಾರದ ಭವಿಷ್ಯ ಏನ್ ಬೇಕಾದರೂ ಆಗಬಹುದು: ಎಚ್‍ಡಿಕೆ

HD Kumaraswamy: ಜನರಿಗೆ ಕೊಟ್ಟ ಭರವಸೆಗಳನ್ನು ತಕ್ಷಣವೇ ಈಡೇರಿಸಬೇಕು. ನಾವು ರಾಜ್ಯದ ಜನರಿಗೆ ಟೋಪಿ ಹಾಕಲು ಬಿಡುವುದಿಲ್ಲ ಎಂದು ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Written by - Puttaraj K Alur | Last Updated : May 25, 2023, 04:04 PM IST
  • ಮುಂಬರುವ ಲೋಕಸಭಾ ಚುನಾವಣೆ ಬಳಿಕ ಈ ಸರ್ಕಾರದ ಭವಿಷ್ಯ ಏನು ಬೇಕಾದರೂ ಆಗಬಹುದು
  • ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ವಿಶ್ವಾಸದ ಕೊರತೆಯಿದೆ
  • ನಾವು ರಾಜ್ಯದ ಜನರಿಗೆ ಟೋಪಿ ಹಾಕಲು ಬಿಡುವುದಿಲ್ಲವೆಂದ ಎಚ್.ಡಿ.ಕುಮಾರಸ್ವಾಮಿ
ಲೋಕಸಭೆ ಚುನಾವಣೆ ಬಳಿಕ ಈ ಸರ್ಕಾರದ ಭವಿಷ್ಯ ಏನ್ ಬೇಕಾದರೂ ಆಗಬಹುದು: ಎಚ್‍ಡಿಕೆ title=
ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ!

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಬಳಿಕ ಈ ಸರ್ಕಾರದ ಭವಿಷ್ಯ ಏನು ಬೇಕಾದರೂ ಆಬಹುದು ಎಂದು ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಜೆಡಿಎಸ್ ಆತ್ಮವಲೋಕನ ಸಭೆಯ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ವಿಶ್ವಾಸದ ಕೊರತೆಯಿದೆ. ಹೀಗಾಗಿ ಲೋಕಸಭಾ ಚುನಾವಣೆ ಬಳಿಕ ಈ ಸರ್ಕಾರದಲ್ಲಿ ಏನು ಬೇಕಾದರೂ ಆಗಬಹುದು ಅಂತಾ ಹೇಳಿದರು.

ಇದನ್ನೂ ಓದಿ: ಅಶೋಕ್ ಪಟ್ಟಣ್ ಮತ್ತು ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು

ನಾವು ಅಧಿಕಾರಕ್ಕೆ ಬಂದ ಕೂಡಲೇ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ನಾಯಕರು ರಾಜ್ಯದ ಜನರಿಗೆ ಭರವಸೆ ನೀಡಿದ್ದರು. ಚುನಾವಣೆಯ ಭಾಷಣದಲ್ಲಿ ಸಿದ್ದರಾಮಯ್ಯನವರು ರಾಜ್ಯದ ಪ್ರತಿಯೊಬ್ಬರೂ ಉಚಿತ ಭರವಸೆಗಳನ್ನು ನೀಡಿದ್ದರು. ಇದೀಗ ಸುಳ್ಳಿ ಹೇಳಿ ಜನರಿಗೆ ಟೋಪಿ ಹಾಕಲು ಮುಂದಾಗಿದ್ದಾರೆ. ನೀಡಿದ ಭರವಸೆಯಂತೆ ಈಗ ಹೇಗೆ ಕೊಡುತ್ತಾರೋ ನೋಡೋಣವೆಂದು ಎಚ್‍ಡಿಕೆ ಸವಾಲು ಹಾಕಿದರು.

ಜನರಿಗೆ ಕೊಟ್ಟ ಭರವಸೆಗಳನ್ನು ತಕ್ಷಣವೇ ಈಡೇರಿಸಬೇಕು. ನಾವು ರಾಜ್ಯದ ಜನರಿಗೆ ಟೋಪಿ ಹಾಕಲು ಬಿಡುವುದಿಲ್ಲ. ಸಂಕಷ್ಟದ ವೇಳೆ ಒಂದು ಸಮುದಾಯದ ಪರ ನಾನು ಅಚಲವಾಗಿ ನಿಂತುಕೊಂಡಿದ್ದೆ. ಆದರೆ ಆ ಸಮುದಾಯದ ಜನರು ಕಾಂಗ್ರೆಸ್‍ಗೆ ಮತ ಹಾಕಿದರು. ಇದರಿಂದ ಜೆಡಿಎಸ್ ಪಕ್ಷಕ್ಕೆ ಹಿನ್ನೆಡೆಯಾಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ಆ ಒಂದು ಸಮುದಾಯವನ್ನು ನಮ್ಮ ವಿರುದ್ಧ ಎತ್ತಿಕಟ್ಟಿದರು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಹೈಕಮಾಂಡ್ ಅಂಗಳದಲ್ಲಿ ಕಾಂಗ್ರೆಸ್ ಮಂತ್ರಿಗಿರಿ ಲೆಕ್ಕಾಚಾರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News