Karnataka political: ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ

Basavaraj Bommaiah: ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ಗಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  

Written by - Savita M B | Last Updated : Feb 29, 2024, 12:54 PM IST
  • ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೆರಳುವ ಸಂದರ್ಭ
  • ಕಾಂಗ್ರೆಸ್ ನವರು ‌ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ.
  • ಮುಖ್ಯಮಂತ್ರಿ ಮಂಡಿಸಿರುವ ಬಜೆಟ್ ಸತ್ಯಕ್ಕೆ ದೋರವಾಗಿದೆ
Karnataka political: ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ title=

Basavaraja Bommai appeal to Governor : ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೆರಳುವ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ‌ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಮಂಡಿಸಿರುವ ಬಜೆಟ್ ಸತ್ಯಕ್ಕೆ ದೋರವಾಗಿದೆ. ಈಗ ಪಾಕಿಸ್ತಾನ‌ ಪರ ಘೋಷಣೆ ಕೂಗಿದವರ ರಕ್ಷಣೆ ಮಾತನಾಡುತ್ತ  ನೈತಿಕವಾಗಿ ದಿವಾಳಿಯಾಗಿದ್ದಾರೆ. ಇವರು ಪ್ರಜಾಪ್ರಭುತ್ವ ಕ್ಕೆ ದಕ್ಕೆಯಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ‌ ಎಂದು ಆರೋಪಿಸಿದರು.

ವಿಧಾನ ಸೌಧದಲ್ಲಿಯೇ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ದೇಶದ ರಕ್ಷಣೆಗೆ ಇದು ಆಪತ್ತಿದೆ‌. ಅಧಿವೇಶವನ ಮುಗಿದ ತಕ್ಷಣ ಇದೆಲ್ಲ ಮರೆತು ಹೋಗುತ್ತಾರೆ ಎಂದು ಕಾಂಗ್ರೆಸ್ ನವರು ಅಂದುಕೊಂಡಿದ್ದಾರೆ.  ಆದರೆ, ಇದನ್ನು ರಾಜ್ಯದ ಜನರು ಮರೆಯುವುದಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.

ಇದನ್ನೂ ಓದಿ-ಪಾಕ್ ಪರ ಘೋಷಣೆ ಆರೋಪ.. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ರಸ್ತೆ ತಡೆ

ಪಾಕ್  ಪರವಾಗಿ ಸರ್ಕಾರ ನಿಲ್ಲುತ್ತದೆ ಅಂದರೆ, ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ. ಈ ಸರ್ಕಾರ ಎಷ್ಟು ಬೇಗ ತೊಲಗುತ್ತದೆ ರಾಜ್ಯಕ್ಕೆ ಅಷ್ಟು ಒಳ್ಳೆಯದಾಗುತ್ತದೆ. ಪಾಕಿಸ್ತಾನದ ಪರ ಘೊಷಣೆ ಕೂಗಿರುವುದು ಮಾಧ್ಯಮಗಳಲ್ಲಿ ಸ್ಪಷ್ಟವಾಗಿ ತೋರಿಸಲಾಗಿದೆ. ಇವರು ಎಫ್ ಎಸ್ ಎಲ್ ವರದಿ ಕತೆ ಏಕೆ ಹೇಳುತ್ತಿದ್ದಾರೆ. 

ಇದನ್ನೂ ಓದಿ-‘ಪ್ರಾಣಿಗಳ ರಕ್ಷಣೆಗಾಗಿ ವಂತಾರ’ದಿಂದ ವಿಶಿಷ್ಟ ಕಾರ್ಯಕ್ರಮ

ಈ ಪ್ರಕರಣ ಮುಚ್ಚಿ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಘಟನೆ ನಡೆದು 48 ಗಂಟೆ ಕಳೆದರೂ ಯಾರನ್ನೂ ಬಂಧಿಸಿಲ್ಲ. ಬೇರೆ  ಘಟನೆ ನಡೆದಾಗ ಎಫ್ ಎಸ್ ಎಲ್ ವರದಿಗಾಗಿ ಕಾಯದೇ ಮೊದಲು ಬಂಧಿಸುತ್ತಿದ್ದರು. ಇದರಲ್ಲಿ ಏನೂ ಇಲ್ಲ ಅಂದರೆ ಪೊಲಿಸರು ಏಕೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು. 

ರಾಜ್ಯದ ಜನರು ಪಾಕಿಸ್ತಾನ ಪರವಾದವನ್ನು ಆಯ್ಕೆ ಮಾಡಿಲ್ಲ. ಇದು ಕನ್ನಡಿಗರ ಹಾಗೂ ಭಾರತೀಯರ ಹಾಗೂ ಸಂವಿಧಾನ ವಿರೋಧಿ ಸರ್ಕಾರ ಈ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News