ಬೆಂಗಳೂರು: ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.


COMMERCIAL BREAK
SCROLL TO CONTINUE READING

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಮಥಾಯಿ, “ಮೈಸೂರಿನ ದಸರಾ ಉತ್ಸವಕ್ಕೆ ಐತಿಹಾಸಿಕ ಹಾಗೂ ಧಾರ್ಮಿಕವಾಗಿ ಬಹಳ ಮಹತ್ವವಿದೆ. ನಾಡಿಗೆ ಅಪಾರ ಕೊಡುಗೆ ನೀಡಿ ರಾಜರುಗಳು, ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ದಸರಾದಲ್ಲಿ ಭಾಗವಹಿಸಿದ್ದಾರೆ. ಈ ವರ್ಷ ಕೂಡ ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ದಸರಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಕೋನದಾಸಪುರದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಅಕ್ರಮಕ್ಕೆ ಸಂಬಂಧಿಸಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಅವರು ದಸರಾ ಉತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳಂಕ ತರಬಾರದು” ಎಂದು ಹೇಳಿದರು.


ಆರ್‌ಸಿಬಿ...ಆರ್‌ಸಿಬಿ... ಎಂದು ಕೂಗಿದ ಫ್ಯಾನ್ಸ್‌ ಮೇಲೆ ಕಿಂಗ್‌ ಕೊಹ್ಲಿ ಗರಂ..!


“ಕಳಂಕಿತ ಸಚಿವ ಎಸ್.ಟಿ.ಸೋಮಶೇಖರ್‌ರವರು ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ನಾಡಹಬ್ಬದ ಘನತೆ ಉಳಿಸಲು ಅವರು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ಭ್ರಷ್ಟ ಸಚಿವರು ಸರ್ಕಾರದ ಉನ್ನತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ರಾಜ್ಯಪಾಲರು ಅವಕಾಶ ನೀಡದಿದ್ದರೆ, ಎಲ್ಲ ಭ್ರಷ್ಟ ಜನಪ್ರತಿನಿಧಿಗಳಿಗೂ ಇದೊಂದು ಎಚ್ಚರಿಕೆಯ ಗಂಟೆಯಾಗುತ್ತದೆ” ಎಂದು ಕೆ.ಮಥಾಯಿ ಹೇಳಿದರು.


[[{"fid":"258860","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಇದನ್ನೂ ಓದಿ: ʼಇವನಿಗೆ ಮದುವೆ ಆದ್ರೂ ಮಾಡ್ರೋ ಸುಧಾರಿಸ್ತಾನೆʼ : ಧವನ್‌ ಕಾಟಕ್ಕೆ ಸುಸ್ತಾದ ಜಡೇಜಾ..!


ಇದೇ ಸಂದರ್ಭದಲ್ಲಿ ಹಾಜರಿದ್ದ ಸಂಘಟನ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡುತ್ತಾ "ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ₹567 ಕೋಟಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಕಚೇರಿಯಲ್ಲಿ ಸಾಕ್ಷಿ ಸಹಿತ ದೂರು ದಾಖಲಾಗಿದೆ. 29.5 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪದಲ್ಲಿ ಎಸ್‌.ಟಿ. ಸೋಮಶೇಖರ್‌, ಬಿ.ಎಸ್‌.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಮಂದಿಯು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ಸಚಿವ ಸೋಮಶೇಖರ್‌ರವರು ಸಚಿವ ಸ್ಥಾನದಲ್ಲಿ ಮುಂದುವರಿದಿರುವುದೇ ತಪ್ಪು. ಅದರಲ್ಲೂ ಅವರು ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚುಕೊಳ್ಳುವುದು ಇನ್ನೂ ದೊಡ್ಡ ತಪ್ಪು” ಎಂದು ಹೇಳಿದರು.


ನಿಯೋಗದಲ್ಲಿ ಚನ್ನಪ್ಪಗೌಡ ನೆಲ್ಲೂರು ,ವಿಶ್ವನಾಥ್, ವೇಣುಗೋಪಾಲ್ ,ಮಹೇಶ್ ಬಾಬು ಸೇರಿದಂತೆ ಇನ್ನಿತರರು ಹಾಜರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.