ಅತಿ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ
ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ದೂರಿದೆ.
ಬೆಂಗಳೂರು: ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದು ಜಾತ್ಯತೀತ ಜನತಾದಳ ಆರೋಪಿಸಿದೆ.
ಇದನ್ನೂ ಓದಿ: ಮುಂಜಾನೆ ಹಳಸಿದ ಬಾಯಿಗೆ ಈ ಹಣ್ಣಿನ ರಸ ಸೇವಿಸಿದರೆ ದಿನವಿಡೀ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಟ್ರೈ ಮಾಡಿ ನೋಡಿ
ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪಕ್ಷವು, ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ದೂರಿದೆ.
ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್ ಸರಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.
ಇದನ್ನೂ ಓದಿ: ಮಧುಮೇಹಿಗಳು ರಾತ್ರಿ ಮಲಗುವ ವೇಳೆ ಒಂದು ಚಮಚ ಈ ಎಣ್ಣೆ ಸೇವಿಸಿ: ಬೆಳಗಾಗುವಷ್ಟರಲ್ಲಿ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್!
ಪ್ರೀತಿ ನಿರಾಕರಿಸಿದ ಕಾರಣಕ್ಕೆ ಜೀವ ತೆಗೆದ ಪರಮ ಪಾಪಿಯನ್ನು ಸುಮ್ಮನೆ ಬಿಡಬಾರದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸರಕಾರ ಕಟ್ಟೆಚ್ಚರ ವಹಿಸಬೇಕು. ಆ ನತದೃಷ್ಟ ವಿದ್ಯಾರ್ಥಿನಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜೆಡಿಎಸ್ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.