ಪುಸ್ತಕ ಬಹುಮಾನಕ್ಕೆ ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2021ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಜನವರಿ 2021 ರಿಂದ ಡಿಸೆಂಬರ್ 2021 ರೊಳಗಾಗಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.

Written by - Zee Kannada News Desk | Last Updated : Feb 10, 2022, 10:46 PM IST
  • ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು.ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು.ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.
ಪುಸ್ತಕ ಬಹುಮಾನಕ್ಕೆ ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ title=

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2021ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಜನವರಿ 2021 ರಿಂದ ಡಿಸೆಂಬರ್ 2021 ರೊಳಗಾಗಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ : High Court : 'ತೀರ್ಪು ಬರುವವರೆಗೂ ಧಾರ್ಮಿಕ ಉಡುಗೆ ತೊಡಬಾರದು' : ಹೈಕೋರ್ಟ್‌ ಖಡಕ್ ಸೂಚನೆ

ಆಯ್ಕೆಯಾದ ಪುಸ್ತಕಕ್ಕೆ ರೂ.25,000/-ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು.ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು.ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಇದನ್ನೂ ಓದಿ : ಹ್ಯಾಂಡ್ ಸಮ್ ಅಲ್ಲು ಅರ್ಜುನ್ ಪುಷ್ಪಾದ ರಗಡ್ ಲುಕ್ ಗೆ ಬದಲಾದಾಗ.. ಇಲ್ಲಿದೆ ನಟನ Transforming ವಿಡಿಯೋ

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು-560 002, ಇವರಿಗೆ ಫೆಬ್ರವರಿ 23 ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸಬೇಕು.

ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22113146 ಗೆ ಸಂಪರ್ಕಿಸಬಹುದು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ ಪಡೆಯಬಹುದು ಎಂದು ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು  Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News