ಬೆಂಗಳೂರು: ಕಲಬುರಗಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಯ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗಳ (ಮೀಸಲಾತಿ ಹಂತ (ರೋಸ್ಟರ ಪದ್ದತಿ) ಯಂತೆ) ಗೌರವ ಸಂಭಾವನೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IPL 2022 Mega Auction ನಲ್ಲಿ ಈ 2 ವೇಗದ ಬೌಲರ್‌ಗಳಿಗೆ ಭಾರಿ ಬೇಡಿಕೆ!


ಜೇವರ್ಗಿ ತಾಲೂಕಿನ ಹರವಾಳ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಯನ್ನು 3(ಬಿ) ಸಾಮಾನ್ಯ, ಆಳಂದ ತಾಲೂಕಿನ ಹೊದಲೂರ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಯನ್ನು ಸಾಮಾನ್ಯ (ಮಾ.ಸೈ), ಚಿತ್ತಾಪೂರ ತಾಲೂಕಿನ ಕೊಲ್ಲೂರ ಗ್ರಾಮ ಪಂಚಾಯಿತಿಯ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆಯನ್ನು 2(ಎ) ಸಾಮಾನ್ಯ (ಗ್ರಾಮೀಣ) ಹಾಗೂ ಆಳಂದ ತಾಲೂಕಿನ ಪಡಸಾವಳಗಿ ಗ್ರಾಮ ಪಂಚಾಯಿತಿಯ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ    ಮೀಸಲಿಡಲಾಗಿದೆ.


ಇದನ್ನೂ ಓದಿ: Indian Team : ಟೀಂ ಇಂಡಿಯಾದ ಈ ಆಟಗಾರರ ವೃತ್ತಿಜೀವನಕ್ಕೆ ಅಡ್ಡಿಯಾದ KL Rahul! 


ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ (ಸರ್ಟಿಫಿಕೇಟ್ ಕೋರ್ಸ್) ಪಡೆದ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ಆಯ್ಕೆಯಾದ ಮೇಲ್ವಿಚಾರಕರಿಗೆ ಪ್ರತಿ ತಿಂಗಳು 12,000 ರೂ.ಗಳ ಗೌರವ ಸಂಭಾವನೆ ನೀಡಲಾಗುತ್ತದೆ.ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿರಬೇಕು.(ಆರ್.ಡಿ. ನಂಬರ್ ಹೊಂದಿದ ದೃಢೀಕರಣ ಪತ್ರ ಲಗತ್ತಿಸಿರಬೇಕು). ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕಾ ಕಲಿಕಾ ಕೇಂದ್ರಗಳ ಪ್ರೇರಕ/ ಉಪಪ್ರೇರಕರೆಂದು ಸೇವೆ ಸಲ್ಲಿಸಿದ್ದಲ್ಲಿ ಅಂತಹವರಿಗೆ ಪ್ರಾಧಾನ್ಯತೆ ನೀಡಲಾಗುತ್ತದೆ. (ಜಿಲ್ಲಾ ಮತ್ತು ತಾಲೂಕು ಸಂಯೋಜಕರಿಂದ ಪಡೆದ ಪ್ರಮಾಣಪತ್ರ ಸಲ್ಲಿಸಬೇಕು).


ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ  ದಾಖಲಾತಿಗಳಾದ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ವರ್ಗಾವಣೆ ಪ್ರಮಾಣಪತ್ರ, ಆರ್.ಡಿ. ನಂಬರ್ ಹೊಂದಿರುವ ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ನಿವಾಸಿ ದೃಢೀಕರಣ ಪತ್ರ, ಅಂಗವಿಕಲತೆ (ಇದ್ದಲ್ಲಿ) ದೃಢೀಕರಣ ಪತ್ರ, ಆಧಾರ್ ಕಾರ್ಡ್, ರೇಶನ್ ಕಾರ್ಡ್ ಹಾಗೂ ಓಟರ್ ಐಡಿಯನ್ನು ಸ್ವಯಂ ದೃಢೀಕರಿಸಿ ಕಲಬುರಗಿ ಮಿನಿ ವಿಧಾನ ಸೌಧದ 3ನೇ ಮಹಡಿಯಲ್ಲಿನ ರೂಮ್   ನಂ. 26 ರಲ್ಲಿನ ಕಲಬುರಗಿ ಜಿಲ್ಲಾ  ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಗೆ ಖುದ್ದಾಗಿ ಬಂದು  2022ರ ಫೆಬ್ರವರಿ 28 ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.


ನಿಗದಿತ ಅರ್ಜಿ ನಮೂನೆ, ವಯೋಮಿತಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-221069ಗೆ ಸಂಪರ್ಕಿಸಲು ಕೋರಲಾಗಿದೆ.


ಇದನ್ನೂ ಓದಿ : Rishabh Pant: ರಿಷಭ್ ಪಂತ್‌ನಿಂದ ಈ ಮೂವರು ಆಟಗಾರರ ವೃತ್ತಿಜೀವನಕ್ಕೆ ಕಂಟಕ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.