ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Oct 25, 2021, 11:06 PM IST
  • ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪಡೆದಿರಬೇಕು.
  • ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.
  • ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.
 ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಕೋಲಾರ್: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಲಾಖೆಯ ಜಿಲ್ಲಾ ಕಛೇರಿಗಳಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡದ ಒಬ್ಬ ಅಭ್ಯರ್ಥಿಯನ್ನು ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ 15,000/- ರೂಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿಯನ್ನು ನೀಡಲಾಗುವುದು.

ಇದನ್ನೂ ಓದಿ: ಏಮ್ಸ್ ಗೆ ದಾಖಲಾದ ಬಂಗಾಳದ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್

ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಮತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ನವೆಂಬರ್ 10 ರೊಳಗೆ ಹಿರಿಯ ಸಹಾಯಕ ನಿರ್ದೇಶಕರ ಕಛೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣ, ಕೋಲಾರ ಇವರಿಗೆ ಸಲ್ಲಿಸಬೇಕು.\

ಇದನ್ನೂ ಓದಿ: 7th Pay Commission : ಕೇಂದ್ರ ನೌಕರರ ಸಂಬಳದಲ್ಲಿ ಸಿಗಲಿದೆ Double Bonanza! DA ಶೇ.3 ರಷ್ಟು ಮತ್ತು ಬಾಕಿ ಲೆಕ್ಕಾಚಾರ ನೋಡಿ

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಿರುವ ಇಲಾಖಾ ಕಛೇರಿಯಲ್ಲಿ ಅಥವಾ ಇ ಮೇಲ್ vaarthailakhedipokolar@gmail.com ಹಾಗೂ ಮೊಬೈಲ್ ಸಂಖ್ಯೆ 9480841219 ನ್ನು ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಕೋಲಾರದ ಹಿರಿಯ ಸಹಾಯಕ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News