ಬೆಂಗಳೂರು : ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಕೃಷಿ ಮೇಳ 2020 ರಲ್ಲಿ ಕೆಳಕಂಡ ವಿವಿಧ ಕೃಷಿಕ ಪ್ರಶಸ್ತಿಗಳನ್ನು ನೀಡುವ ಸಂಬಂಧ ಅರ್ಹ ರೈತರು ಹಾಗೂ ರೈತ ಮಹಿಳೆಯರು ಅರ್ಜಿಯನ್ನು ದಿನಾಂಕ 25-07-2020 ರೊಳಗಾಗಿ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.


COMMERCIAL BREAK
SCROLL TO CONTINUE READING

ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವಗೌಡ ರಾಜ್ಯಮಟ್ಟದ ಅತ್ತುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ., ಡಾ|| ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕೆ ರೈತ ಪ್ರಶಸ್ತಿ , ಶ್ರೀ ಸಿ. ಬೈರೇಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ .


ಮೇಲ್ಕಂಡ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ನಮೂನೆಯನ್ನು ಕೃಷಿ ವಿಶ್ವವಿದ್ಯಾನಿಲಯದ ವೆಬ್ ಸೈಟ್ www.uasbangalore.edu.in ನಿಂದ ಪಡೆಯಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ರುದ್ರೇಶಪ್ಪ ಟಿ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.