ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2021ರ ಜನೆವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ ಎಂದು ಮುದ್ರಿತವಾಗಿರಬೇಕು. ಮರುಮುದ್ರಣವಾದ ಪುಸ್ತಕಗಳು, ಪಠ್ಯಪುಸ್ತಕಗಳು, ಪಿ.ಎಚ್.ಡಿ ಪದವಿಗಾಗಿ ಸಂಶೋಧಿಸಿದ ಗ್ರಂಥ ಮತ್ತಿತರ ಕೃತಿಗಳು ಬಹುಮಾನಕ್ಕಾಗಿ ಪರಿಗಣಿಸಲ್ಪಡುವದಿಲ್ಲ.
ಇದನ್ನೂ ಓದಿ: Pension Scheme : ಸರ್ಕಾರದ ಈ ಯೋಜನೆಯಲ್ಲಿ ಪಡೆಯಿರಿ ₹60,000 ಪಿಂಚಣಿ!
ಪ್ರಕಟವಾದ ಪುಸ್ತಕಗಳ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು 560002 ಇವರಿಗೆ ರಿಜಿಸ್ಟರ್ಡ್ ಅಂಚೆ ಹಾಗೂ ಕೊರಿಯರ್ ಮೂಲಕ ಅಥವಾ ಖುದ್ದಾಗಿ 2022ರ ಜೂನ್ 15 ರೊಳಗಾಗಿ ತಲುಪಿಸಬೇಕು.
ಇದನ್ನೂ ಓದಿ: ‘ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ’
ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರಿರುತ್ತದೆ ಎಂಬುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ 080-22211730, 22106460 ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ರಿಜಿಸ್ಟ್ರಾರ್ ಎನ್.ಕರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.